ರಾಜಕೀಯ

’ಕುದುರೆ ವ್ಯಾಪಾರ’ ಕುರಿತ ಸಿದ್ದರಾಮಯ್ಯ ಆರೋಪ ಆಧಾರರಹಿತ: ರವಿಶಂಕರ್ ಪ್ರಸಾದ್

Raghavendra Adiga
ನವದೆಹಲಿ: ಕರ್ನಾಟಕದಲ್ಲಿ ಕುದುರೆ ವ್ಯಾಪಾರ ನಡೆಸಲು ಪ್ರಧಾನಿ ಮೋದಿ ಬಿಜೆಪಿ ನಾಯಕರಿಗೆ ಪ್ರಚೋದನೆ ನಿಡುತ್ತಿದ್ದಾರೆ ಎನ್ನುವ ಕರ್ನಾಟಕ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಶುದ್ದ ಸುಳ್ಳು, ಇದೊಂದು ಆಧಾರರಹಿತ, ಬೇಜವಾಬ್ದಾರಿ ಹೇಳಿಕೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಎಎನ್ ಐ ಜತೆ ಮಾತನಾಡಿದ ಪ್ರಸಾದ್ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ಕುದುರೆ ವ್ಯಾಪಾರಕ್ಕೆ ಪ್ರೋತ್ಸಾಹಿಸಿದ್ದಾರೆ ಎನ್ನುವ ಸಿದ್ದರಾಮಯ್ಯ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಮಂಗಳವಾರ ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿಬಿಜೆಪಿ 104 ಸ್ಥಾನಗಳೊಡನೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಕಾಂಗ್ರೆಸ್ ಮತ್ತು ಜೆಡಿ (ಎಸ್) ಕ್ರಮವಾಗಿ 78 ಹಾಗೂ 37 ಸ್ಥಾನಗಳನ್ನು ಗೆದ್ದುಕೊಂಡಿವೆ.
ಫಲಿತಾಂಶ ಬಂದ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡುತದೆ ಆ ಮೂಲಕ  ಸರ್ಕಾರ ರಚನೆಗೆ ಬೇಕಾದ ಬಹುಮತ ಪಡೆಯಲಿದ್ದೇವೆ ಎಂದು ಪಕ್ಷದ ವಕ್ತಾರರು ಘೋಷಿಸಿದ್ದಾರೆ.
ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶಗಳು ಅತಂತ್ರವಾಗಿದ್ದು ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರ ರಚನೆ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
SCROLL FOR NEXT