ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯಕುಮಾರ್ ನಿಧನಿಂದ ಮುಂದೂಡಿಕೆಯಾಗಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 11 ರಂದು ಮತದಾನ ನಡೆಯಲಿದ್ದು, ಜೂನ್ 16ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮೇ 18 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮೇ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಕಾಂಗ್ರೆಸ್ ನಿಂದ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಕೂಡ ಘೋಷಣೆಯಾಗಿಲ್ಲ.
ಇನ್ನು ವೋಟರ್ ಐಡಿ ಕಾರ್ಡ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಮೇ 28ರಂದು ಚುನಾವಣೆ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics