ದೇವೇಗೌಡ ಹಾಗೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ರಾಜ್ಯ ರಾಜಕೀಯ: ದೇವೇಗೌಡ-ರಾಹುಲ್ ಗಾಂಧಿ ಚರ್ಚೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದ ಬೆನ್ನಲ್ಲಿಯೇ ಪ್ರಮುಖ ವಿರೋಧ ಪಕ್ಷಗಳಾದ ಜೆಡಿಎಸ್ ಹಾಗೂ ....

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದ ಬೆನ್ನಲ್ಲಿಯೇ ಪ್ರಮುಖ ವಿರೋಧ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ತಮ್ಮ ತಂತ್ರಗಾರಿಕೆಯನ್ನು ಮುಂದುವರಿಸಿದೆ.
ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡಹಾಗೂ ಕಾಂಗ್ರೆಸ್ ಅಧ್ಯಕ್ಷ  ರಾಹುಲ್‌ ಗಾಂಧಿ ಚರ್ಚೆ ನಡೆಸಿದ್ದಾರೆ.
ಪ್ರಸಕ್ತ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತಂತೆ ಇಬ್ಬರೂ ನಾಯಕರು ದೂರವಾಣಿ ಮೂಲಕ ಸಂಬಾಷಣೆ ನಡೆಸಿದ್ದಾರೆ.
ಈ ನಡುವೆ ಜೆಡಿಎಸ್‌ ಶಾಸಕರು ಕೊಚ್ಚಿಗೆ ತೆರಳಲು ಸಿದ್ದತೆಗಳು ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ಬೆಳವಣಿಗೆಗಳು ನಡೆಯುತ್ತಿದ್ದು ಚುನಾವಣೆಯಲ್ಲಿ ಗರಿಷ್ಠ ಸಂಖ್ಯೆಯ ಶಾಸಕರನ್ನು ಪಡೆದ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನಿಡಿದ್ದಾರೆ ಈ ಪ್ರಕಾರ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ.
ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ತಡೆಯಲೆತ್ನಿಸಿದ ಕಾಂಗ್ರೆಸ್-ಜೆಡಿಎಸ್ ಮಧ್ಯರಾತ್ರಿ ಸುಪ್ರೀಂ ಮೆಟ್ಟಿಲೇರಿದ್ದವು. ಆದರೆ ನ್ಯಾಯಾಲಯವು ರಾಜ್ಯಪಾಲರ ಆದೇಶಕ್ಕೆ ತಡೆ ನಿಡಲು ಸಾಧ್ಯವಿಲ್ಲ ಎನ್ನುವ ಮೂಲಕ ಇಂದು ಬೆಳಗಿನ ಪ್ರಮಾಣವಚನಕ್ಕೆ ಅವಕಾಶ ಮಾಡಿಕೊಟ್ಟಿತ್ತು.
ಮುಂದುವರಿದ ವರ್ಗಾವಣೆ ಪರ್ವ
ಯಡಿಯೂರಪ್ಪ ಕರ್ನಾಟಕರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಾರಂಭವಾಗಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದ ಅಡ್ವೋಕೇಟ್ ಜನರಲ್ ಆಗಿದ್ದ ಮಧುಸೂದನ್​ ನಾಯ್ಕ್ ಬದಲಾಗಿ ಪ್ರಭುಲಿಂಗ ಕೆ ನವಡಗಿ ಅವರನ್ನು ನೂತನ ಅಡ್ವೊಕೇಟ್​ ಜನರಲ್​ ಆಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ