ಸಿದ್ದರಾಮಯ್ಯ 
ರಾಜಕೀಯ

ಸಂವಿಧಾನದ ವಿರುದ್ಧ ಬಿಜೆಪಿ ನಡೆ ಕುರಿತು ಜನರಿಗೆ ಹೇಳುತ್ತೇವೆ: ಸಿದ್ದರಾಮಯ್ಯ

ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಬೆಂಗಳೂರು: ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ಸುಪ್ರೀಂಕೋರ್ಟ್ ಅಂಗಳದಲ್ಲಿ, ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಹಲವು ವಿರೋಧಗಳ ನಡುವೆ, ಸಾಕಷ್ಟು ಬೆಳವಣಿಗೆಗಳ ಬಳಿಕ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಮುಖ್ಮಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ವಿಧಾನಸಭೆ ಅತಂತ್ರ ವಿಚಾರ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ. ಆದರೂ ಬಿಜೆಪಿ ಸಂವಿಧಾನದ ವಿರುದ್ಧ ನಡೆಯುತ್ತಿದೆ. ಬಿಜೆಪಿಯ ಈ ಅಸಂವಿಧಾನಿಕ ನಡೆಯ ಕುರಿತು ಜನರ ಬಳಿ ಹೋಗಿ ವಿವರಿಸುತ್ತೇವೆಂದು ಹೇಳಿದ್ದಾರೆ. 
ಈ ನಡುವೆ ಆಪರೇಷನ್ ಕಮಲದ ಭೀತಿಯಿಂದಾಗಿ ಶಾಸಕರನ್ನು ಬಿಡದಿ ಬಳಿಯಿರುವ ಈಗಲ್ ಟನ್ ರೆಸಾರ್ಟ್'ನಲ್ಲಿ ಬಚ್ಚಿಟ್ಟಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಇದೀಗ ಹೊರಗೆ ಕರೆತಂದಿದ್ದು, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ನಗರದ ಗಾಂಧಿ ಪ್ರತಿಮೆ ಬಳಿ ಭಾರೀ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಇದೀಗ ಮುಂದಾಗಿವೆ ಎಂದು ತಿಳಿದುಬಂದಿದೆ. ಪ್ರತಿಭಟನೆಯಲ್ಲಿ ಜಿಎನ್. ಆಜಾದ್, ಅಶೋಕ್ ಗೆಲ್ಹೋಟ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್'ನ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!