ತುಮಕೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರು ನಂತರ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಮುಖ್ಯಮಂತ್ರಿಯಾದ ಬಳಿಕ ಯಡಿಯೂರಪ್ಪ ಅವರು ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು.
ರಾಜ್ಯಪಾಲ ವಾಜುಭಾಯ್ ವಾಲಾ ಅವರ ನಿನ್ನೆ ಪ್ರಮಾಣ ವಚನ ಸ್ವೀಕರಿಸಲು ಬಿಎಸ್ ಯಡಿಯೂರಪ್ಪ ಅವರಿಗೆ ಸೂಡಿಸಿದ್ದು ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶವನ್ನು ನೀಡಿದ್ದರು.
ಇಂದು ಬೆಳಗ್ಗೆ ರಾಜಭವನದಲ್ಲಿ ವಾಜುಭಾಯ್ ವಾಲಾ ಅವರು ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.