ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಶಾಸಕರೊಬ್ಬರಿಗೆ ಆಮಿಷ ಒಡ್ಡುತ್ತಿರುವ ಆಡಿಯೋ ನಕಲಿ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು, ಕಾಂಗ್ರೆಸ್ ಬಿಡುಗಡೆ ಮಾಡಿರುವ ಜನಾರ್ದನ ರೆಡ್ಡಿ ಆಡಿಯೋ ಟೇಪ್ ಸಂಪೂರ್ಣ ಫೇಕ್, ಇದು ಕಾಂಗ್ರೆಸ್ ಪಕ್ಷದ ಕುತಂತ್ರ ಎಂದು ಆರೋಪಿಸಿದ್ದಾರೆ.
ಜನಾರ್ದನ ರೆಡ್ಡಿ ಅವರು ರಾಯಚೂರು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಅವರಿಗೆ ಕರೆ ಮಾಡಿ ಆಮಿಷ ಒಡ್ಡಿದ ಆಡಿಯೋವೊಂದನ್ನು ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ ಅವರು ಇಂದು ಸಂಜೆ ಬಿಡುಗಡೆ ಮಾಡಿದ್ದರು.