ಭೀತಿ ಪ್ರಶ್ನೆಯೇ ಇಲ್ಲ, ಜೆಡಿಎಸ್-ಕಾಂಗ್ರೆಸ್ ಶಾಸಕರು ಒಗ್ಗಟ್ಟಿನಿಂದಿದ್ದಾರೆ: ಕುಮಾರಸ್ವಾಮಿ
ಭೀತಿಯ ಪ್ರಶ್ನೆಯೇ ಇಲ್ಲ. ಬಿಜೆಪಿಯವರ ಕುದುರೆ ವ್ಯಾಪಾರ ತಡೆಗಟ್ಟಲು ಹಾಗೂ ಬಹುಮತ ಸಾಬೀತುಪಡಿಸುವ ಸಲವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಒಗ್ಗಟ್ಟನಿಂದ ಇದ್ದೇವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...
ಬೆಂಗಳೂರು: ಭೀತಿಯ ಪ್ರಶ್ನೆಯೇ ಇಲ್ಲ. ಬಿಜೆಪಿಯವರ ಕುದುರೆ ವ್ಯಾಪಾರ ತಡೆಗಟ್ಟಲು ಹಾಗೂ ಬಹುಮತ ಸಾಬೀತುಪಡಿಸುವ ಸಲವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಒಗ್ಗಟ್ಟನಿಂದ ಇದ್ದೇವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಸ್ಥಳಾಂತರ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭೀತಿಗೊಳಗಾಗುವ ಯಾವುದೇ ಪ್ರಶ್ನೆ ಇಲ್ಲ. ಆದರೆ, ಹಿಂದಿನ ಅನುಭವಗಳಿಂದಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಕುದುರೆ ವ್ಯಾಪಾರಕ್ಕೆ ನಾವು ಪ್ರೋತ್ಸಾಹ ನೀಡುವುದಿಲ್ಲ. ಕುದುರೆ ವ್ಯಾಪಾರಕ್ಕೆ ತಡೆಯೊಡ್ಡುವ ಸಲುವಾಗಿ ನಾವೆಲ್ಲರೂ ಒಟ್ಟಾಗಿದ್ದೇವೆಂದು ಹೇಳಿದ್ದಾರೆ.
ಬಿಜೆಪಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ನಾಯಕರು ಸಾಕಷ್ಟು ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೀಗಾಗಿ ನಾವು ಒಗ್ಗಟ್ಟನಿಂದ ಇದ್ದೇವೆಂದು ತಿಳಿಸಿದ್ದಾರೆ.