ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ವಿಶ್ವಾಸಮತಯಾಚನೆ ವೇಳೆ ಶೇ.100ರಷ್ಟು ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಶೇ.100 ರಷ್ಟು ಬಹುಮತ ಸಾಬೀತು ಪಡಿಸುವ ವಿಶ್ವಾಸವಿದೆ. ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿ, ನಾಳೆ ವಿಧಾನಮಂಡಲ ಅಧಿವೇಶನಕ್ಕೆ ಕರೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಬಹುಮತ ಇಲ್ಲದ ಹೊರತಾಗಿಯೂ ಬಿಜೆಪಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಸರ್ಕಾರ ರಚಿಸಲು ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಜೆಡಿಎಸ್-ಕಾಂಗ್ರೆಸ್ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಪೀಠ, ಸದನದಲ್ಲಿ ಬಹುಮತ ಸಾಬೀತು ಮಾಡುವುದೇ ಅಂತಿಮ ಮತ್ತು ಸೂಕ್ತ ಪರಿಹಾರ. ಬಹುಮತ ಸಾಬೀತು ಪಡಿಸುವ ಪ್ರಕ್ರಿಯೆಗೆ ಹೆಚ್ಚಿನ ಸಮಯಾವಕಾಶ ನೀಡಲು ಸಾಧ್ಯವಿಲ್ಲ. ಆದ್ದರಿಂದ ಶನಿವಾರ ಸಂಜೆ 4 ಗಂಟೆಗೆ ಸದನದಲ್ಲಿ ಬಹುಮತ ಸಾಬೀತಾಗಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics