ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ 
ರಾಜಕೀಯ

104 ಸಂಖ್ಯಾಬಲ ಹೊಂದಿರುವ ಬಿಜೆಪಿ ನಮ್ಮ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ: ವೀರಪ್ಪ ಮೊಯ್ಲಿ

104 ಸಂಖ್ಯಾಬಲವನ್ನು ಹೊಂದಿರುವ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ನಮ್ಮ ಶಾಸಕರು ಸುರಕ್ಷಿತವಾಗಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿಯವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: 104 ಸಂಖ್ಯಾಬಲವನ್ನು ಹೊಂದಿರುವ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ನಮ್ಮ ಶಾಸಕರು ಸುರಕ್ಷಿತವಾಗಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿಯವರು ಶನಿವಾರ ಹೇಳಿದ್ದಾರೆ. 
ವಿಧಾನಮಂಡಲ ಅಧಿವೇಶನಕ್ಕೆ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಗೈರು ಹಾಜರಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ತಮ್ಮ ಸಂಖ್ಯಾಬಲ 104 ಇದೆ ಎಂಬುದು ಬಿಜೆಪಿಗೆ ಗೊತ್ತಿದೆ. ಹಾಗಿದ್ದರೂ ತಮ್ಮ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 
ಸಂಖ್ಯಾಬಲವನ್ನು ಹೆಚ್ಚಿಸುವ ಯತ್ನದಲ್ಲಿರುವ ಬಿಜೆಪಿ, ನಮ್ಮ ಶಾಸಕರನ್ನು ಖರೀದಿ ಮಾಡಲು ಯತ್ನ ನಡೆಸುತ್ತಿದೆ. ಆದರೆ, ನಮ್ಮ ಶಾಸಕರು ಸುರಕ್ಷಿತರಾಗಿದ್ದಾರೆ. ನಮ್ಮ ಇಬ್ಬರು ಶಾಸಕರು ಸದನಕ್ಕೆ ಹಾಜರಾಗಿಲ್ಲ. ಅವರು ಎಲ್ಲಿಯೇ ಇದ್ದರೂ ಶೀಘ್ರದಲ್ಲಿಯೇ ಸದನಕ್ಕೆ ಹಾಜರಾಗಿ ನಮಗೆ ಬೆಂಬಲ ನೀಡಲಿದ್ದಾರೆ. ಬಿಜೆಪಿಯ ಬಣ್ಣ ಇಡೀ ಜಗತ್ತಿನ ಎದುರು ಬಯಲಾಗಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್