ಬೆಂಗಳೂರು: ಬಿಜೆಪಿ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಸಂಜೆ ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು, ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ ನೀಡಿದ್ದು, 15 ದಿನದೊಳಗೆ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ ಎಂದರು.
ರಾಜ್ಯಪಾಲರ ಆಹ್ವಾನದ ಹಿನ್ನೆಲೆಯಲ್ಲಿ ನಾನು ಸೋಮವಾರ ಬೆಳಗ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ತಿಳಿಸಿದ್ದಾರೆ.
ಇದೇ ವೇಳೆ ಸಚಿವರ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics