ರಾಜಕೀಯ

'ವಿಶ್ವಾಸಮತ' ಕಲಾಪ ಆರಂಭ; ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಶಾಸಕರಾಗಿ ಪ್ರಮಾಣ ಸ್ವೀಕಾರ

Vishwanath S
ಬೆಂಗಳೂರು: ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಇಂದು ಶಾಸಕರಿಗೆ ಪ್ರಮಾಣವಚನ ಬೋಧಿಸಿದರು. 
ವಂದೇ ಮಾತರಂ ಗೀತೆಯೊಂದಿಗೆ ಕಲಾಪ ಆರಂಭವಾಗಿದ್ದು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿಗಳೆಲ್ಲರು ಇಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. 
ಮೊದಲಿಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಿಂದ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. 
ನಂತರ ಒಂದೊಂದೆ ಪಕ್ಷದ ಶಾಸಕರು ಕ್ರಮವಾಗಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ವಿಧಾನಸಭೆ ಅತಂತ್ರ ಫಲಿತಾಂಶದಿಂದಾಗಿ ಇಂದು ವಿಶ್ವಾಸಮತ ಸಾಬೀತು ಪಡಿಸಲು ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಇಂದು ಸಂಜೆ 4ಕ್ಕೆ ಮುಹೂರ್ತ ನಿಗದಿ ಮಾಡಿದೆ. 
ಇನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯನ್ನು ತ್ರಿಸದಸ್ಯ ಪೀಠ ವಜಾಗೊಳಿಸಿದ್ದು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಮುಂದುವರೆಯಲಿದ್ದಾರೆ.
SCROLL FOR NEXT