ಬೆಂಗಳೂರು; ವಿಧಾನಸಭೆಯಲ್ಲಿ ಅತಂತ್ರ ಸ್ಥಿತಿ ಎದುರಾದಾಗಿನಿಂದಲೂ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಶನಿವಾರ ಪತ್ತೆಯಾಗಿದ್ದು, ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ತಂಗಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.
ಆನಂದ್ ಸಿಂಗ್ ಅವರು ಪತ್ತೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದ್ದ ಆಂತಕ ಕೊಂಚಮಟ್ಟಿಗೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ.
ಹೋಟೆಲ್ ನಿಂದ ಹೊರಬಂದ ಆನಂದ್ ಸಿಂಗ್ ಅವರು ನೇರವಾಗಿ ವಿಧಾನಸೌಧಕ್ಕೆ ಆಗಮಿಸುತ್ತಿದ್ದು, ವಿಶ್ವಾಸಮತಯಾಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.