ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ: ಹೆಚ್ ಡಿಕೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ...

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಾಗೂ ಮಂತ್ರಿಮಂಡಲ ಕುರಿತು ಚರ್ಚೆ ನಡೆಸಲಿದ್ದೇನೆ. ಅವರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ಹೇಳಿದರು.

ಅವರು ಇಂದು ಬೆಳಿಗ್ಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಹೊರಬಂದ ನಂತರ ಇಂದು ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದೇನೆ ಹೆಚ್ ಡಿಕೆ ತಿಳಿಸಿದರು.

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಜೆಡಿಎಸ್ ಶಾಸಕರು ಇನ್ನೂ ಕೂಡ ತಂಗಿದ್ದು. ವಿಶ್ವಾಸಮತ ಯಾಚನೆಗೆ ಮುನ್ನ ಶಾಸಕರ ಜೊತೆ ಹೆಚ್ ಡಿ ಕುಮಾರಸ್ವಾಮಿ ಮತ್ತೊಂದು ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ