ಸಂಗ್ರಹ ಚಿತ್ರ 
ರಾಜಕೀಯ

ಬಹುಮತ ಸಾಬೀತಿಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ: ಡಿವಿ ಸದಾನಂದಗೌಡ

ಹಾಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಅಥವಾ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

ಮಂಡ್ಯ: ಹಾಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಅಥವಾ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಆಯಸ್ಸು ಕೇವಲ 3 ತಿಂಗಳ ಮಾತ್ರ.. ಅಥವಾ ಅದಕ್ಕೂ ಮುನ್ನವೇ ಅಂದರೆ ಬಹುಮತ ಸಾಬೀತಿಗೂ ಮುನ್ನವೇ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
'ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದು ಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.
ಅಂತೆಯೇ 'ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್​ ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಈಗ ನಾವು ವಿಫಲರಾಗಿರಬಹುದು. ಆದರೆ ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ' ಎಂದರು.
ಶಾಸಕರಿಗೆ ಆಮಿಷ ಒಡ್ಡಿದ ಆರೋಪಗಳ ಆಡಿಯೋ ಫೇಕ್
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್​. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!