ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಗವಹಿಸಲಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಕೇಜ್ರಿವಾಲ್ ಅವರ ಆಪ್ತರು ತಿಳಿಸಿದ್ದಾರೆ.