ಸಂಗ್ರಹ ಚಿತ್ರ 
ರಾಜಕೀಯ

ದೂರವಾಗದ 'ಆಪರೇಷನ್‌ ಕಮಲ' ಭೀತಿ, 'ಮಿಸ್ಸಿಂಗ್ ಶಾಸಕರ' ಮೇಲೆ ಹದ್ದಿನಕಣ್ಣು

ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿನ್ನೂ ಆತಂಕ ಕಡಿಮೆಯಾದಂತೆ ಕಾಣುತ್ತಿಲ್ಲ. ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿರುವಂತೆಯೇ ಇತ್ತ ಆಪರೇಷನ್ ಕಮಲ ಭೀತಿ ಮೇರೆಗೆ ತನ್ನ ಶಾಸಕರ ಮೇಲೆ ಹದ್ದಿನಕಣ್ಣು ಇಡಲಾಗಿದೆ.

ಬೆಂಗಳೂರು: ಬಿಎಸ್ ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿನ್ನೂ ಆತಂಕ ಕಡಿಮೆಯಾದಂತೆ ಕಾಣುತ್ತಿಲ್ಲ. ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿರುವಂತೆಯೇ ಇತ್ತ ಆಪರೇಷನ್ ಕಮಲ ಭೀತಿ ಮೇರೆಗೆ ತನ್ನ ಶಾಸಕರ ಮೇಲೆ ಹದ್ದಿನಕಣ್ಣು ಇಡಲಾಗಿದೆ.
ವಿಧಾನಸಭೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ಮತ ಸಾಬೀತುಪಡಿಸದಂತೆ ತಡೆದ ಬಳಿಕವೂ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಪಾಳಯದಲ್ಲಿ 'ಆಪರೇಷನ್‌ ಕಮಲ'ದ ಭೀತಿ ಇನ್ನೂ ದೂರವಾಗಿಲ್ಲ. ಮೈತ್ರಿಕೂಟ 117 ಸದಸ್ಯ ಬಲ ಹೊಂದಿದ್ದು, ಬಹುಮತ ಸಾಬೀತುಪಡಿಸಲು 111 ಮತಗಳ ಅಗತ್ಯವಿದೆ. ಬಿಜೆಪಿಯವರು ಇನ್ನು ಮುಂದೆಯೂ ತಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದರೆ ಮೈತ್ರಿಕೂಟ ಸದನದಲ್ಲಿ ಬಹುಮತ ಸಾಬೀತು ಪಡಿಸುವುದು ಕಷ್ಟವಾಗಬಹುದು ಎಂಬ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಅವಕಾಶ ಕಲ್ಪಿಸಬಾರದು ಎಂಬ ಕಾರಣಕ್ಕೆ ಎರಡೂ ಪಕ್ಷಗಳು ಎಚ್ಚರಿಕೆಯ ನಡೆ ಇಟ್ಟಿವೆ.
ಬಹುಶಃ ಇದೇ ಕಾರಣಕ್ಕೆ ನಗರದ ಲಿ-ಮೆರಿಡಿಯನ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ತನ್ನ ಶಾಸಕರನ್ನು ಜೆಡಿಎಸ್‌ ನಾಯಕರು ಭಾನುವಾರ ಸಂಜೆ ದೇವನಹಳ್ಳಿ ಬಳಿಯ ರೆಸಾರ್ಟ್‌ಗೆ ಸ್ಥಳಾಂತರಿಸಿದ್ದಾರೆ. ಅಂತೆಯೇ ಕಾಂಗ್ರೆಸ್‌ ಶಾಸಕರು ದೊಮ್ಮಲೂರಿನ ಹಿಲ್ಟನ್‌ ಹೋಟೆಲ್‌ನಲ್ಲಿ ತಂಗಿದ್ದಾರೆ. ಈ ಹೋಟೆಲ್‌ಗೆ ಖಾಸಗಿ ಭದ್ರತೆ ಒದಗಿಸಲಾಗಿದ್ದು, ಅಪರಿಚಿತ ವಾಹನಗಳು ಹೋಟೆಲ್‌ನತ್ತ ಸುಳಿಯದಂತೆ ತಡೆಯಲಾಗುತ್ತಿದೆ. ಹೋಟೆಲ್‌ಗೆ ಬರುವವರ ಪೂರ್ವಾಪರ ವಿಚಾರಿಸಲಾಗುತ್ತಿದೆ.
ಮಿಸ್ಸಿಂಗ್ ಶಾಸಕರಾದ ಆನಂದ್‌ ಸಿಂಗ್‌, ಪ್ರತಾಪಗೌಡ ಮೇಲೆ ವಿಶೇಷ ನಿಗಾ
ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಪಾಳೆಯದಿಂದ ದೂರ ಉಳಿದಿದ್ದ ವಿಜಯನಗರ (ಬಳ್ಳಾರಿ) ಕ್ಷೇತ್ರದ ಶಾಸಕ ಆನಂದ ಸಿಂಗ್‌ ಮತ್ತು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಶನಿವಾರದಿಂದ ಕಾಂಗ್ರೆಸ್‌ ಪಾಳೆಯದಲ್ಲೇ ಇದ್ದಾರೆ. ಅವರು ಮತ್ತೆ 'ಕೈ' ತಪ್ಪದಿರುವಂತೆ ಪಕ್ಷದ ವರಿಷ್ಠರು ಎಚ್ಚರ ವಹಿಸಿದ್ದಾರೆ. 'ಅವರಿಬ್ಬರ ಮೇಲೆ ವಿಶೇಷ ನಿಗಾ ವಹಿಸಿದ್ದೇವೆ' ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ತಿಳಿಸಿದ್ದಾರೆ.
ಇದಕ್ಕೆ ಇಂಬು ನೀಡುವಂತೆ ನಿನ್ನೆ ಜೆಡಿಎಸ್ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, 'ನಾವು ಯಾವುದೇ ಕಾರಣಕ್ಕೂ ಮೈಮರೆಯಬಾರದು. ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ನಮ್ಮ ಒಗ್ಗಟ್ಟನ್ನು ಮುರಿಯಲು ಅವಕಾಶ ಕಲ್ಪಿಸುವುದು ಬೇಡ' ಎಂದು ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ. 
ಅಂತೆಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಶಾಸಕರಿಗೆ ಇಂತಹುದೇ ಮಾತಗಳನ್ನಾಡಿದ್ದು, 'ನಮ್ಮಲ್ಲಿ ಒಡಕು ಮೂಡಿಸಲು ಬಿಜೆಪಿಯವರು ಕೊನೆಕ್ಷಣದವರೆಗೂ ಪ್ರಯತ್ನ ಮುಂದುವರೆಸುತ್ತಾರೆ. ಬಹುಮತ ಸಾಬೀತುಪಡಿಸುವವರೆಗೂ ಎಲ್ಲರೂ ಒಂದೇ ಕಡೆ ಇರಬೇಕಾಗುತ್ತದೆ. ಒಂದೆರಡು ದಿನ ಸ್ವಲ್ಪ ಕಷ್ಟ ಆಗಬಹುದು. ಆದರೆ, ಭವಿಷ್ಯದಲ್ಲಿ ಎಲ್ಲರಿಗೂ ಒಳ್ಳೆಯದೇ ಆಗಲಿದೆ' ಎಂದು ಶಾಸಕರಲ್ಲಿ ಭರವಸೆ ತುಂಬಿದರು.
ಶಾಸಕರು ಈಗಾಗಲೇ ಐದು ದಿನಗಳಿಂದ ಕ್ಷೇತ್ರ ಹಾಗೂ ಕುಟುಂಬಸ್ಥರಿಂದ ದೂರ ಉಳಿದಿದ್ದರು, ಇದೇ ಕಾರಣಕ್ಕೆ ಭಾನುವಾರ ಕುಟುಂಬಸ್ಥರನ್ನು ಹೋಟೆಲ್‌ ಗೆ ಕರೆಸಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಕುಮಾರಸ್ವಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಗುರುವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಶಾಸಕರು ಇನ್ನೂ ನಾಲ್ಕು ದಿನ ಮನೆಗೆ ಮರಳುವ ಅವಕಾಶ ಇಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ