ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಅಧಿಕಾರ ಪೂರ್ಣಾವಧಿ ಕುರಿತು ಕಾಲವೇ ಉತ್ತರಿಸಲಿದೆ- ಡಿಕೆ ಶಿವಕುಮಾರ್

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪೂರ್ಣಾವಧಿ ಕುರಿತು ಕಾಲವೇ ಉತ್ತರ ನೀಡಲಿದೆ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ...

ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್
Manjula VN
Updated On : 21 May 2018, 2:52 am
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪೂರ್ಣಾವಧಿ ಕುರಿತು ಕಾಲವೇ ಉತ್ತರ ನೀಡಲಿದೆ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಪೂರ್ಣಾವಧಿ ಕುರಿತು ಸಮಯವೇ ಉತ್ತರ ನೀಡಿಲಿದೆ. ಈ ಬಗ್ಗೆ ಪ್ರಸ್ತುತ ನಾನನ್ನು ಏನನ್ನೂ ಹೇಳಲು ಇಚ್ಛಿಸುವುದಿಲ್ಲ. ಪ್ರಸ್ತುತ ನಮ್ಮ ಮುಂದೆ ಸಾಕಷ್ಟು ಸವಾಲುಗಳಿದ್ದು, ಅವುಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆಯನ್ನು ಇಡಲಾಗುತ್ತದೆ ಎಂದು ಹೇಳಿದ್ದಾರೆ. 
ರಾಜ್ಯದಲ್ಲಿ ಜಾತ್ಯಾತೀತ ಸರ್ಕಾರವಿರಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನಿರ್ಧಾರ ಕೈಗೊಂಡಿದ್ದರು. ಇದನ್ನೇ ಇಡೀ ದೇಶ ಕೂಡ ಬಯಸಿದೆ. ಹೀಗಾಗಿಯೇ ಕಾಂಗ್ರೆಸ್ ಸ್ಥಳೀಯ ಪಕ್ಷವಾದ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಕೈಗೊಂಡೆವು. ಎಲ್ಲಾ ಕಹಿಗಳನ್ನು ನುಂಗಲೇ ಬೇಕಿದೆ. ಇದು ನನ್ನ ಕರ್ತವ್ಯ ಎಂದು ತಿಳಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement