ಜಗದೀಶ್ ಶೆಟ್ಟರ್ 
ರಾಜಕೀಯ

ರೈತರ ಸಾಲಮನ್ನಾ ವಿಚಾರದಲ್ಲಿ ಎಚ್ ಡಿಕೆ ಯೂ ಟರ್ನ್​: ಜಗದೀಶ್​ ಶೆಟ್ಟರ್

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ನಿಯೋಚಿತ

ಹುಬ್ಬಳ್ಳಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ನಿಯೋಚಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಉಲ್ಟಾ ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್,  ಕುಮಾರಸ್ವಾಮಿ ಈಗ ಬಹುಮತ ಬಂದಿದ್ದರೆ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಹೇಳುವ ಮೂಲಕ ಯೂಟರ್ನ್​ ಹೊಡೆದಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದು, ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲಾ ಎನ್ನುವ ಹಾಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ವರ್ತಿಸುತ್ತಿದ್ದಾರೆ ಎಂದು ಶೆಟ್ಟರ್ ಕಿಡಿಕಾರಿದರು. 
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ಅವಳಿ ನಗರದ ಮಹಾನಗರ ಪಾಲಿಕೆಗೆ ಬರುವ 130 ಕೋಟಿ ಹಣ ಬಿಡುಗಡೆ ಮಾಡಿಸುತ್ತಿದ್ದೆವು. ಈಗಲೂ ನಾವು ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್