ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ 
ರಾಜಕೀಯ

ನಕಲಿ ಸಿಡಿ; ತನಿಖೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...

ಮೈಸೂರು: ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಎಂಎಲ್'ಸಿ ವಿ.ಎಸ್ ಉಗ್ರಪ್ಪ ಅವರು ಬಿಡುಗಡೆಗೊಳಿಸಿದ್ದ ಬಿಜೆಪಿ ವಿರುದ್ಧದ ಬಿಡುಗಡೆಗೊಳಿಸಿದ್ದ ನಕಲಿ ಸಿಡಿಗಳ ಕುರಿತು ಸರ್ಕಾರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. 
ವಿಶ್ವಾಸಮತಯಾಚನೆ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಯತ್ನ ನಡೆಸಿತ್ತು ಎಂಬ ಆರೋಪವನ್ನು ಇದೇ ವೇಳೆ ತಳ್ಳಿ ಹಾಕಿರುವ ಅವರು, ಇತ್ತೀಚೆಗಷ್ಟೇ ಸ್ವತಃ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರೇ ಸ್ಪಷ್ಟನೆ ನೀಡಿದ್ದರು. ಬಿಜೆಪಿ ಶಾಸಕರನ್ನು ಖರೀದಸಲು ಯತ್ನ ನಡೆಸಿಲ್ಲ ಎಂದು ಹೇಳಿದ್ದರು. ಆರೋಪಗಳು ಸುಳ್ಳು ಎಂಬುದು ಸಾಬೀತುಪಡಿಸಲು ಇದೇ ಸಾಕ್ಷಿ ಎಂದು ಹೇಳಿದ್ದಾರೆ. 
ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಶೀಘ್ರದಲ್ಲಿಯೇ ಉರುಳಿ ಬೀಳಲಿದೆ. ಜನಾದೇಶ ಬಿಜೆಪಿ ಪರವಾಗಿತ್ತು. ಜೆಡಿಎಸ್ ಕಾಂಗ್ರೆಸ್ ಪಕ್ಷಗಳ ಕುತಂತ್ರದ ಬಗ್ಗೆ ಜನರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ. 
ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭಯರ್ಥಿ ವಿಜುಗೌಡ ಪಾಟೀಲ್ ಅವರು, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಬಬಲೇಶ್ವರ ಕ್ಷೇತ್ರದ ವಿವಿ ಪ್ಯಾಟ್ ಯಂತ್ರಗಳನ್ನು ದುರುಪಯೋಗ ಮಾಡಿಕೊಂಡು ಗೆಲವು ಸಾಧಿಸಿದ್ದಾರೆಂದು ಇದೇ ವೇಳೆ ಆರೋಪ ಮಾಡಿದ ಶೋಭಾ ಅವರು, ಸಾಕಷ್ಟು ಭದ್ರತೆ ನೀಡಿ ಇರಿಸಲಾಗಿದ್ದ ವಿವಿ ಪ್ಯಾಟ್ ಯಂತ್ರಗಳು ಖಾಸಗಿ ವ್ಯಕ್ತಿಗೆ ಸೇರಿದೆ ಗೋದಾಮಿನಲ್ಲಿ ಹೇಗೆ ಲಭ್ಯವಾಯಿತು ಎಂದು ಪ್ರಶ್ನೆ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT