ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಹೆಚ್'ಡಿ.ಕುಮಾರಸ್ವಾಮಿ ಪ್ರಮಾಣಕ್ಕೆ ಬಿಜೆಪಿ ವಿರೋಧ; ಜನಮತ ವಿರೋಧಿ ದಿನಾಚರಣೆಗೆ ನಿರ್ಧಾರ

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ವತಿಯಿಂದ ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ...

ಸಂಗ್ರಹ ಚಿತ್ರ
Manjula VN
Updated On : 23 May 2018, 1:12 am
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ವತಿಯಿಂದ ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 
ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಪಕ್ಷದ ಯಾವುದೇ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಬಿಜೆಪಿ ಹೇಳಿದೆ. 
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ವಕ್ತಾರ ಶಾಂತರಾಮ್ ಅವರು, ಅಪವಿತ್ರ ಮೈತ್ರಿ ಸರ್ಕಾರದ ವಿರುದ್ಧ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳು ಸೇರಿದಂತೆ ರಾಜ್ಯಾದಾದ್ಯಂತ ಪಕ್ಷದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆಂದು ಹೇಳಿದ್ದಾರೆ. 

Advertisement

Advertisement

ಬೆಂಗಳೂರು ನಗರದ ಮೌರ್ಯ ಹೋಟೆಲ್ ಎದುರಿನ ಗಾಂಧೀಜಿ ಪ್ರತಿಮೆ ಎದುರು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖಂಡರಾದ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. ಅಲ್ಲದೆ, ಬುಧವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಬಿಜೆಪಿ ಪರಾಜಿತ ಅಭ್ಯರ್ಥಿಗಳ ಸಭೆಯನ್ನೂ ಮುಂದೂಡಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement