ಬೆಂಗಳೂರು: ಮೇ.23 ರಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ ಪರಮೆಶ್ವರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಯಂತ್ರಗಳನ್ನು ತಿರುಚಿತ್ತು ಎಂದು ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿರುವ ಪರಮೇಶ್ವರ್, ನನಗೆ ಹಾಗೂ ನಮ್ಮ ಕೆಲವು ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಯಂತ್ರಗಳನ್ನು ತಿರುಚಿದೆ ಎನಿಸುತ್ತಿದೆ. ಕಾಂಗ್ರೆಸ್ ಬಲಿಷ್ಠವಾಗಿರುವ ಪ್ರದೇಶಗಳಲ್ಲಿಯೂ ಸೋತಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ, ಬ್ಯಾಲೆಟ್ ಪೇಪರ್ ನ್ನು ಪುನಃ ಬಳಕೆ ಮಾಡುವಂತೆ ಒತ್ತಾಯಿಸುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ಚುನಾವಣೆಗೆ ಸಂಬಂಧಿಸಿದಂತೆಯೂ ಮಾತನಾಡಿರುವ ಪರಮೆಶ್ವರ್, ರಾಜರಾಜೆಶ್ವರಿ ನಗರದಲ್ಲಿ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.