ಡಿ. ಕೆ. ಶಿವಕುಮಾರ್ 
ರಾಜಕೀಯ

ಬಿಜೆಪಿಯ ಒತ್ತಡ , ಬೆದರಿಕೆಗೆ ತಂತ್ರಗಳಿಗೆ ಬಗ್ಗುವುದಿಲ್ಲ- ಡಿ. ಕೆ. ಶಿವಕುಮಾರ್

ಸರ್ಕಾರ 24 ಗಂಟೆಯೊಳಗೆ ರಾಜ್ಯದ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ 24 ಗಂಟೆಯೊಳಗೆ  ರಾಜ್ಯದ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಾಲ ಮನ್ನಾ ಮಾಡಬೇಕೆಂಬ ಬಿಜೆಪಿಯ ಒತ್ತಡ ಹಾಗೂ ಬೆದರಿಕೆ ತಂತ್ರಕ್ಕೆ  ಕಾಂಗ್ರೆಸ್ ಬಗ್ಗುವುದಿಲ್ಲ , ನಾವು ಸರ್ಕಾರಕ್ಕೆ ಜವಾಬ್ದಾರರಾಗಿರುತ್ತೇವೆ. ಆದರೆ. ಬಿಜೆಪಿಗೆ ಒಳಿತಾಗಲಿ ಎಂದು ವರ್ತಿಸುವುದಿಲ್ಲ ಎಂದರು.

 ಬಿಜೆಪಿ ಸಾರ್ವಜನಿಕ ಹಣವನ್ನು ಪೋಲು ಮಾಡುವುದಿಲ್ಲ ಎಂಬ ನಂಬಿಕೆ ಇದೆ.  ಒಂದು ವೇಳೆ ಬಂದ್ ನಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದ್ದರೆ, ಅದರ ಹೊಣೆಯನ್ನು ಬಿಜೆಪಿಯೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!