ಸಂಗ್ರಹ ಚಿತ್ರ 
ರಾಜಕೀಯ

ಕಣದಿಂದ ಹಿಂದೆ ಸರಿದ ಸುರೇಶ್ ಕುಮಾರ್, ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಯ್ಕೆ ವಿಚಾರ ಕೊನೆಗೂ ಮುಕ್ತಾಯಗೊಂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಸ್ಪರ್ಧೆ ಒಡ್ಡಿದ್ದ ಬಿಜೆಪಿಯ ಸುರೇಶ್ ಕುಮಾರ್ ಅವರು ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಆ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಜಂಟಿ ಅಭ್ಯರ್ಥಿ ಸುರೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದಂತಾಗಿದೆ.
ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಪಕ್ಷಗ ನಿರ್ಧಾರದಂತೆ ತಾವು ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಸಭಾಧ್ಯಕ್ಷರು ಸರ್ವಾನುಮತದಿಂದ ಆಯ್ಕೆಯಾಗುವುದು ಸೂಕ್ತವೆಂದು ಅಭಿಪ್ರಾಯ ಪಟ್ಟ ಕಾರಣ ನಾಮಪತ್ರ ವಾಪಸ್ಸು ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಆ ಮೂಲಕ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಲಿದ್ದ ಅವರ ನೇತೃತ್ವದಲ್ಲೇ ವಿಶ್ವಾಸಮತಯಾಚನೆ ಪ್ರಕ್ರಿಯೆ ಕೂಡ ನಡೆಯಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT