ರಾಜಕೀಯ

ವಿಶ್ವಾಸಮತ ಆಯ್ತು; ಈಗ ಸಂಪುಟ ರಚನೆ ಕಸರತ್ತು; ಜಾತಿ ಲೆಕ್ಕಾಚಾರದಲ್ಲಿ ಕಾಂಗ್ರೆಸ್

Nagaraja AB

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತು ಪಡಿಸಿದ ಬೆನ್ನಲ್ಲೇ  ಸಚಿವ ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗಿದ್ದು, ಕಾಂಗ್ರೆಸ್  ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಹಲವು  ಹೊಂದಾಣಿಕೆಯೊಂದಿಗೆ ಜೆಡಿಎಸ್ ನೊಂದಿಗೆ  ವಿಶ್ವಾಸ ಪಡೆಯುವಲ್ಲಿ ಯಶಸ್ವಿಗೊಂಡಿದೆ.

 ಆದಾಗ್ಯೂ, ಜೆಡಿಎಸ್ ನೊಂದಿಗೆ ಅಧಿಕಾರ ಹಂಚಿಕೆಯಂತೆ ಕಾಂಗ್ರೆಸ್ 22 ಸಚಿವ ಸ್ಥಾನಗಳನ್ನು ಪಡೆದುಕೊಂಡಿದ್ದು, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಬೇಕೆಂಬುದು ವರಿಷ್ಠರಿಗೆ ತಲೆ ನೋವಾಗಿ ಪರಿಣಮಿಸಿದೆ.
ಪಕ್ಷೇತರ ಶಾಸಕರು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಗಳು
ಕಷ್ಟದ ಸಂದರ್ಭದಲ್ಲಿ ಪಕ್ಷೇತರ ಶಾಸಕರಾದ ಶಿವಾನಂದ ಪಾಟೀಲ್, ರಾಜಶೇಖರ್ ಪಾಟೇಲ್ ಕಾಂಗ್ರೆಸ್ ಕೈ ಹಿಡಿದಿದ್ದಾರೆ ಅವರಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡಲೇ ಬೇಕಾಗುತ್ತದೆ. ಆದರೆ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ವರಿಷ್ಠರಿಗೆ ದೊಡ್ಡ ತಲೆನೋವಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
SCROLL FOR NEXT