ಎಚ್.ಡಿ. ದೇವೇಗೌಡ 
ರಾಜಕೀಯ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೇವಲ ವಿಧಾನಸೌಧದಲ್ಲಿ ಮಾತ್ರ: ಎಚ್.ಡಿ.ದೇವೇಗೌಡ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಧಾನಸೌಧದೊಳಗೆ ಮಾತ್ರ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ...

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಧಾನಸೌಧದೊಳಗೆ ಮಾತ್ರ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸುವುದು ನನ್ನ ಜವಾಬ್ದಾರಿಯಾಗಿದೆ. ಬಿಬಿಎಂಪಿ ಸದಸ್ಯರು, ಕಾರ್ಯಕರ್ತರ ತೀರ್ಮಾನ ಸಹ ಇದೇ ಆಗಿದೆ. ನಮ್ಮ  ಪಕ್ಷ ಯಾವ ಹಂಗಿನಲ್ಲಿಯೂ ಇಲ್ಲ  ಈ ಹಿಂದೆ ಸಹ ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚಿಸಿದ್ದೇವೆ. ಹಾಗೆಂದ ಮಾತ್ರಕ್ಕೆ ಉಪಚುನಾವಣೆಗಳಲ್ಲಿ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಗೌಡರು ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.
ಮೇ  12ಕ್ಕೆ ಇಲ್ಲಿ ಚುನಾವಣೆ ನಡೆಯಬೇಕಿತ್ತು. ಕಾಂಗ್ರೆಸ್ ಅಭ್ಯರ್ಥಿ ಅದೇನನ್ನು ಮಾಡಿದ್ದಾರೆನ್ನುವುದು ಚುನಾವಣಾ ಆಯೋಗಕ್ಕೆ ಗೊತ್ತಿದೆ. ನಾವು ಹೇಳುವುದಿಲ್ಲ,  ಬಿಬಿಎಂಪಿ ಸದಸ್ಯರ ಮನವಿ  ಅನುಸಾರ ರಾಮಚಂದ್ರ ಅವರನ್ನು ಇಲ್ಲಿ ಕಣಕ್ಕಿಳಿಸಲಾಗಿದೆ.  ಹಾಗೆಯೇ ನಾವು ಮೈತ್ರಿ ಸರ್ಕಾರಕ್ಕೆ ತೊಂದರೆ ನೀಡಬೇಕೆಂಬ ಉದ್ದೇಶ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.
ಯಡಿಯೂರಪ್ಪ ಅವರ ಟೀಕೆಗೆ ಪ್ರತಿಕ್ರಿಯೆ ನೀಡಿದ್ದ ದೇವೇಗೌಡ ಅವರ ಟೀಕೆಗೆ ಉತ್ತರ ನಿಡುವ ಕಾಲ ಸಮೀಪದಲ್ಲಿಯೇ ಇದೆ. ಯಾರು ಏನು ಮಾಡಿದ್ದಾರೆ ನನಗೆ ಗೊತ್ತು. ಅವರ ಪ್ರಮಾಣಪತ್ರ ನನಗೆ ಬೇಡ ಎಂದರು.
ರಾಜರಾಜೇಶ್ವರಿ ಕ್ಷೇತ್ರದ ಅಭ್ಯರ್ಥಿ ರಾಮಚಂದ್ರ, ಶಾಸಕ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಕೋನರೆಡ್ಡಿ , ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ  ಇನ್ನೂ ಮೊದಲಾದವರು ಪ್ರಚಾರದಲ್ಲಿ ತೊಡಗಿದ್ದಾರೆ.
ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮತದಾನ ಇದೇ 28ಕ್ಕೆ ನಡೆಯಲಿದೆ ಫಲಿತಾಂಶ 31ರಂದು ಹೊರಬೀಳಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT