ಬೆಂಗಳೂರು: ಕೇಂದ್ರದಲ್ಲಿ ನಾಲ್ಕು ವರ್ಷ ಪೂರೈಸಿದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸಿದೆಯೇ? ಎಂಬ ವರದಿಗಾರರ ಪ್ರಶ್ನಿಗೆ, ಅದನ್ನು ಜನರೇ ನಿರ್ಧಾರ ಮಾಡುತ್ತಾರೆ. ಕಾದು ನೋಡಿ ಎಂದು ಸಿಎಂ ಉತ್ತರಿಸಿದರು.
'ಅವರು ಭಾಷಣಗಳ ಮೂಲಕ ಜನತೆಗೆ ಹಲವು ಭರವಸೆಗಳನ್ನು ನೀಡಿದ್ದಾರೆ. ದೊಡ್ಡ ದೊಡ್ಡ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಆದರೆ ಅವುಗಳನ್ನು ಜಾರಿಗೆ ತರಲು ಬಿಜೆಪಿಯಿಂದ ಸಾಧ್ಯವಾಗಿಲ್ಲ ಎಂದು ಹಲವು ರಾಜಕೀಯ ತಜ್ಞರು ವಿಶ್ಲೇಷಣೆ ಮಾಡಿರುವುದಾಗಿ' ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ನಾನು ಸಮಯ ಕೇಳಿದ್ದೇನೆ. ನಾಳೆ ಅಥವಾ ನಾಡಿದ್ದು ಭೇಟಿಗೆ ಸಮಯ ನೀಡುವ ಸಾಧ್ಯತೆ ಇದ್ದು, ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics