ವಿಧಾನಸೌಧದಲ್ಲಿ ಮೈತ್ರಿ: ಆರ್ ಆರ್ ನಗರದಲ್ಲಿ ದೋಸ್ತಿಗಳ ಕುಸ್ತಿ!
ರಾಜ ರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ..
ಬೆಂಗಳೂರು: ರಾಜ ರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಆರ್ಆರ್ ನಗರದಲ್ಲಿ ಪ್ರತ್ಯೇಕವಾಗಿಯೇ ಚುನಾವಣೆ ಎದುರಿಸುತ್ತಿವೆ.
ಮೈತ್ರಿ ಸರ್ಕಾರದ ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ 2 ಪಕ್ಷಗಳು ಚುನಾವಣೆ ಎದುರಿಸುತ್ತಿವೆ ಎರಡು ಪಕ್ಷದ ಅಭ್ಯರ್ಥಿಗಳು ಪ್ರಬಲರಾಗಿದ್ದಾರೆ, ಈ ಇಬ್ಬರು ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.
ಚುನಾವಣಾ ನಂತರದ ಮೈತ್ರಿ ಪಕ್ಷಗಳು ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿವೆ, ಜೂನ್ 11 ರಂದು ನಡೆಯುವ ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ನಾವು ನಿಮಗೆ ಬೆಂಬಲ ನೀಡುತ್ತೇವೆ, ಆರ್ ಆರ್ ನಗರದಲ್ಲಿ ನೀವು ನಮಗೆ ಬೆಂಬಲ ನೀಡಬೇಕು ಎಂದು ಜೆಡಿಎಸ್ ಕಾಂಗ್ರೆಸ್ ಗೆ ಆಹ್ವಾನ ನೀಡಿತ್ತು.
ಆದರೆ ಅಭ್ಯರ್ಥಿಗಳನ್ನು ವಾಪಾಸ್ ಪಡೆದುಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಅದೇ ರೀತಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ವಾಪಸ್ ಕರೆಸಿಕೊಂಡಿದ್ದರೇ, ನನ್ನ ನೈತಿಕತೆ ಹೆಚ್ಚುತ್ತಿತ್ತು.. .
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಮ್ಮ ಪಕ್ಷದ ಅಭ್ಯರ್ಥಿ. ಜಿ.ಎಚ್ ರಾಮಚ್ದರ ವಿರುದ್ಧ, ಭಾನುವಾರ ಪ್ರಚಾರ ನಡೆಸಿದರು.