ಕುಮಾರ ಸ್ವಾಮಿ ಮತ್ತು ಪರಮೇಶ್ವರ್
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಒಮ್ಮತಕ್ಕೆ ಬಂದಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಜೆಡಿಎಸ್ ಗೆ ಹಣಕಾಸು ಹಾಗೂ ಕಾಂಗ್ರೆಸ್ ಗೆ ಗೃಹ ಖಾತೆ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಗೃಹ ಖಾತೆಯನ್ನು ಹೊರತು ಪಡಿಸಿ ಕಾಂಗ್ರೆಸ್ ಗೆ ಬೃಹತ್ ಕೈಗಾರಿಕೆ, ಇಂಧನ, ಐಟಿ-ಬಿಟಿ, ಸಾರಿಗೆ ಮತ್ತು ಶಿಕ್ಷಣ ಖಾತೆಗಳನ್ನು ಬಿಟ್ಟುಕೊಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸುಮಾರು 5 ಸುತ್ತಿನ ಮಾತುಕತೆ ನಡೆಸಿದ ನಂತರ ಖಾತೆ ಹಂಚಿಕೆ ಸಂಬಂಧ ಸಹಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ, ರಾಹುಲ್ ಗಾಂಧಿ ವಿದೇಶದಲ್ಲಿದ್ದು ಅವರು ವಾಪಾಸಾದ ನಂತರ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ,
ಇನ್ನೂ ಜೆಡಿಎಸ್ ಗೆ ಕಂದಾಯ ಮತ್ತು ಸಹಕಾರ ವ್ಯವನಹಾರಗಳ ಖಾತೆ ನೀಡುವ ತೀರ್ಮಾನಕ್ಕೆ ಬರಲಾಗಿದೆ, ಕರ್ನಾಟಕ ವಿಧಾನ ಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 15 ದಿನ ಕಳೆದಿದ್ದು ಇನ್ನೂ ಸಂಪುಟ ವಿಸ್ತರಣೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ,
ಕಾಂಗ್ರೆಸ್ -ಜೆಡಿಎಸ್ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿದ್ದು ಸರ್ಕಾರ ರಚಿಸಲಾಗಿದೆ, ಜೆಡಿಎಸ್ ನ ನಿಂದ ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನಿಂದ ಪರಮಷಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics