ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ದೂರು ದಾಖಲಾಗಿದೆ.
ಲೋಕಸಭಾ ಉಪಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಎಚ್ಡಿಕೆ, ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತೇನೆ ಎಂದಿದ್ದರು.
ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಡಿಸಿ ಕೆ.ಎ.ದಯಾನಂದ ಅವರು ಸಿಎಂ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಇನ್ನೂ ಸಿಎಂ ವಿರುದ್ಧ ಬಿಜೆಪಿ ಕೂಡ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರು ಸಲ್ಲಿಸಿತ್ತು.