ಮತದಾನ ಮಾಡಿದ ಪ್ರಮುಖ ನಾಯಕರು
ಮಂಡ್ಯ/ ಶಿವಮೊಗ್ಗ: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಹಲವು ಘಟಾನುಘಟಿ ನಾಯಕರುಗಳು ಬೂತ್ ಗೆ ಬಂದು ಮತ ಚಲಾಯಿಸಿದ್ದಾರೆ.
ನಟ ಹಾಗೂ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರು ಮೊಬೈಲ್ ಟಾರ್ಚ್ ಲೈಟ್ ಸಹಾಯದಿಂದ ಮತದಾನ ಮಾಡಿದ್ದಾರೆ. ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಅಂಬರೀಶ್ ಬಂದಿದ್ದರು. ಈ ವೇಳೆ ವಿವಿ ಪ್ಯಾಟ್ ಬಳಿ ನಿಂತು ಇಲ್ಲಿ ಕತ್ತಲೆ ಏನು ಗಾಣುತ್ತಿಲ್ಲ ಎಂದು ಬೆಂಬಲಿಗರಿಗೆ ಹೇಳಿದರು. ಬಳಿಕ ಬೆಂಬಲಿಗರು ಮೊಬೈಲ್ ಟಾರ್ಚ್ ವ್ಯವಸ್ಥೆ ಮಾಡಿದರು. ಮೊಬೈಲ್ ಟಾರ್ಚ್ ಬೆಳಕಿನ ಸಹಾಯದಿಂದ ಅಂಬರೀಶ್ ವೋಟ್ ಮಾಡಿದರು.
ಮತಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಬರೀಷ್ ರಾಮನಗರದಲ್ಲಾದ ಬೆಳವಣಿಗೆಗಳಿಗೆ ಅದು ಸರಿಯಾದುದ್ದಲ್ಲ. ಆದರೆ ಒಳಗಡೆ ಏನೇನೂ ಮಾತುಕತೆಗಳು ನಡೆದಿದೆಯೋ ಯಾರಿಗೂ ಗೊತ್ತಿಲ್ಲ. ಮನಸ್ತಾಪ ಇರಬಹುದು ಅಥವಾ ಬೇರೆ ರೀತಿಯ ವ್ಯವಹಾರ ಇರಬಹುದು ಅಷ್ಟೇ ಎಂದರು.
ಇನ್ನೂ ಶಿವಮೊಗ್ಗದ ಶಿಕಾರಿಪುರದ ವಾರ್ಡ್ ನಂ 132ನೇ ಬೂತ್ ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತಚಲಾಯಿಸಿದರು. ಇದೇ ವೇಳೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಬಿಎಸ್ ವೈ ಹಾಗೂ ಪುತ್ರ ರಾಘವೇಂದ್ರ ಕುಟುಂಬ ಸಮೇತ ಹುಚ್ಚರಾಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಬಂದು ಮತ ಚಲಾಯಿಸಿದರು.
ಶಿವಮೊಗ್ಗ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕಬ್ಟೂರ್ ಬೂತ್ ನಲ್ಲಿ ಮತ ಚಲಾಯಿಸಿದರು.
ಜಮಖಂಡಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಬೆಳಗ್ಗೆಯೇ ಹಿರೇಪದಸಲಗಿಗೆ ತಮ್ಮಪತ್ನಿ ಜೊತೆ ಬಂದು ಮತ ಚಲಾಯಿಸಿದರು.ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics