ಮಾಜಿ ಸಚಿವ ಎ ಮಂಜು ಮತ್ತು ಜಯಮಾಲಾ (ಸಂಗ್ರಹ ಚಿತ್ರ) 
ರಾಜಕೀಯ

ಜಯಮಾಲಾ ಸಚಿವೆಯಾಗುವುದಕ್ಕೆ ನಾಲಾಯಕ್: ಎ ಮಂಜು ಆಕ್ರೋಶ

ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಸಚಿವೆ ಜಯಮಾಲಾ ಹೊಗಳಿರುವುದು ಇದೀಗ ...

ಹಾಸನ: ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಸಚಿವೆ ಜಯಮಾಲಾ ಹೊಗಳಿರುವುದು ಇದೀಗ ಹಾಸನ ಜಿಲ್ಲೆಯ ಕಾಂಗ್ರೆಸ್ ನಾಯಕರ ಸಿಟ್ಟು, ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಜಿಲ್ಲೆಯ ಕಾಂಗ್ರೆಸ್ ನಾಯಕ ಎ ಮಂಜು, ಸಚಿವೆ ಜಯಮಾಲಾ ಶ್ರವಣಬೆಳಗೊಳಕ್ಕೆ ಬಂದಿರುವುದು ಸರ್ಕಾರದ ಕಾರ್ಯಕ್ರಮಕ್ಕಾಗಿ ಸಚಿವೆಯಾಗಿ, ಅಲ್ಲಿಗೆ ಬಂದಿರುವ ಪ್ರಸ್ತುತತೆಯನ್ನು ಅವರು ಅರ್ಥ ಮಾಡಿಕೊಂಡು ಅಷ್ಟು ಕೆಲಸ ಮಾಡಿ ಹೋಗಬೇಕಿತ್ತು. ಅದು ಬಿಟ್ಟು ಸಚಿವ ರೇವಣ್ಣನವರ ಏಜೆಂಟರಾಗಿ ಅಲ್ಲಿಗೆ ಬಂದಿದ್ದಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವೆಂದರೆ ಸಿನಿಮಾವಲ್ಲ, ಸಿನಿಮಾದಲ್ಲಿ ಡೈಲಾಗ್ ಹೊಡೆದ ರೀತಿ ಇಲ್ಲಿ ಮಾತನಾಡಲಾಗುವುದಿಲ್ಲ, ಸಿನಿಮಾದಲ್ಲಿ ತಾವು ಎವರ್ ಗ್ರೀನ್ ತಾರೆ ಎಂದು ಅವರು ಹೇಳಿಕೊಳ್ಳಬಹುದು. ಆದರೆ ರಾಜಕೀಯದಲ್ಲಿ ಅವೆಲ್ಲ ನಡೆಯುವುದಿಲ್ಲ, ಇಂಥ ಅನನುಭವಿಗಳು ಮಂತ್ರಿಯಾಗುವುದಕ್ಕೆ ನಾಲಾಯಕ್, ಕಾಂಗ್ರೆಸ್ ನಲ್ಲಿದ್ದುಕೊಂಡು ಅವರು ಈ ರೀತಿ ಹೇಳಿಕೆ ನೀಡುವುದು ಪಕ್ಷಕ್ಕೆ ಅವಮಾನ ಮಾಡಿದಂತೆ ಎಂದು ಟೀಕಿಸಿದ್ದಾರೆ.

ಸಚಿವೆ ಜಯಮಾಲಾ ಹೇಳಿರುವುದನ್ನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ, ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಒತ್ತಾಯಿಸುತ್ತೇವೆ, ರಾಜ್ಯದ ಮಂತ್ರಿಯಾಗಿ ಅವರು ಈ ರೀತಿ ಮಾತನಾಡುವುದು ಶುದ್ಧ ತಪ್ಪು, ಈ ಬಗ್ಗೆ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಎ ಮಂಜು ಸಚಿವೆ ಜಯಮಾಲಾ ಅವರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT