ಸೋಲು ಅನಾಥ: ಬಳ್ಳಾರಿ ಸೋಲಿನ ಹೊಣೆ ನನ್ನದೇ- ಶ್ರೀರಾಮುಲು 
ರಾಜಕೀಯ

ಸೋಲು ಅನಾಥ: ಬಳ್ಳಾರಿ ಸೋಲಿನ ಹೊಣೆ ನನ್ನದೇ- ಶ್ರೀರಾಮುಲು

ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ಪಕ್ಷದ ಸೋಲಿಗೆ ನಾನು ಯಾರನ್ನೂ ದೂರುವುದಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು: ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, ಪಕ್ಷದ ಸೋಲಿಗೆ ನಾನು ಯಾರನ್ನೂ ದೂರುವುದಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ. 
ಸೋಲು ಎಂದಿಗೂ ಅನಾಥ, ಶಾಂತಾ ಅವರ ಸೋಲಿನ ಹೊಣೆ ನನ್ನದೇ,  ಉಪಚುನಾವಣೆಗೆ ಸಹಕಾರ ನೀಡದಿರುವುದಕ್ಕೆ ಸೋತೆ ಎಂದು ಯಾರನ್ನೂ ದೂರುವುದಿಲ್ಲ.  ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಆದರೆ ಜಿಲ್ಲೆಯ ಜನರು ನಮ್ಮನ್ನು ತಿರಸ್ಕರಿಸಿದ್ದಾರೆ. ಜನತೆಯ ತೀರ್ಪನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. 
ಕಾರ್ಯಕರ್ತರ ಶ್ರಮದ ಹೊರತಾಗಿಯೂ  ಭಗವಂತ ನಮಗೆ ಫಲ ಕೊಟ್ಟಿಲ್ಲ. ಆದರೆ ಆಡಳಿತ ಯಂತ್ರವನ್ನು ದುರುಪಯೋಗ ಪಡೆಸಿಕೊಂಡು ವಿ.ಎಸ್.ಉಗ್ರಪ್ಪ ಅವರನ್ನು ಗೆಲ್ಲಿಸಲಾಗಿದೆ.  ಕ್ಷೇತ್ರದ ಜನರು ನನಗೆ ಸಹಕಾರ ನೀಡಿದ್ದಾರೆ.  ಈಗ ಕೈಬಿಟ್ಟರು ಅಂತ ನಾನು ಅವರನ್ನು ದ್ವೇಷಿಸುವುದಿಲ್ಲ ಎಂದು ಶ್ರೀರಾಮುಲು ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 
ಉಪಚುನಾವಣೆಯ ಫಲಿತಾಂಶ 2019ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ.ಇತರ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಪ್ರಾಬಲ್ಯವಿತ್ತು. ಹೀಗಾಗಿ ಜಯ ಗಳಿಸಿದ್ದಾರೆ. ಬಳ್ಳಾರಿ ಕ್ಷೇತ್ರದ ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ ಎಂದು ರಾಮುಲು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!