ಸಾಂದರ್ಭಿಕ ಚಿತ್ರ 
ರಾಜಕೀಯ

ಉಪ ಚುನಾವಣೆ: ದೋಸ್ತಿಗೆ ಜೈಎಂದ ಮತದಾರ! ಬಿಜೆಪಿಗೆ ಭಾರೀ ಮುಖಭಂಗ

ತೀವ್ರ ಕುತೂಹಲ ಕೆರಳಿಸಿದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು  ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ದಾಖಲೆ ರೀತಿಯಲ್ಲಿ 2, 14,826 ಮತಗಳ ಅಂತರದಿಂದ  ಮೂಲಕ ಭರ್ಜರಿ ಜಯಬೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ. ಶಾಂತ ಸೋಲಿಗೆ ಶರಣಾಗಿದ್ದಾರೆ.
ಮಂಡ್ಯದಲ್ಲಿ  ಜೆಡಿಎಸ್ - ಕಾಂಗ್ರೆಸ್ ಅಭ್ಯರ್ಥಿ ಎಲ್. ಆರ್. ಶಿವರಾಮೇಗೌಡ 2, 33,517 ಮತಗಳ ಅಂತರದಿಂದ  ಭರ್ಜರಿ ಗೆಲುವು ಸಾಧಿಸಿದ್ದು,  ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಸೋಲಿಗೆ ಶರಣಾಗಿದ್ದಾರೆ.
ಮಲೆನಾಡು ಶಿವಮೊಗ್ಗದಲ್ಲಿ  ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ  4, 73, 88 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, 109137 ಮತಗಳ ಅಂತರದಿಂದ  ಭರ್ಜರಿ ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೊನೆಗೆ ಕಾಂಗ್ರೆಸ್ ಸೇರಿದ ಎಲ್. ಚಂದ್ರಶೇಖರ್ 13 ಸಾವಿರದ 249 ಮತಗಳನ್ನು ಪಡೆದು ಸೋಲಿಗೆ ಶರಣಾಗಿದ್ದಾರೆ.
ಜಮಖಂಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video