ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ - ಬಿ.ಎಸ್. ಯಡಿಯೂರಪ್ಪ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ
Nagaraja AB
Updated On : 6 Nov 2018, 2:26 am

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ  ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಿದ್ದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದರು.

 ಬಳ್ಳಾರಿ, ಜಮಖಂಡಿಯಲ್ಲಿ ಬಿಜೆಪಿಗೆ ಹಿನ್ನೆಡೆ ಆಗಿದ್ದರೂ ಮಂಡ್ಯದಲ್ಲಿ ಸೋತಿದ್ದರೂ ಪಕ್ಷದ ಸಾಧನೆ ಗಣನೀಯವಾಗಿದೆ. ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ 2 ಲಕ್ಷದ 40 ಸಾವಿರ ಮತಗಳನ್ನು ಪಡೆದಿರುವುದು ಸಂತೋಷದ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಶಿವಮೊಗ್ಗ ಉಪಚುನಾವಣೆಯಲ್ಲಿ  ತಮ್ಮ ಮಗ ಬಿ. ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿದಕ್ಕಾಗಿ ಮತದಾರರಿಗೆ ಯಡಿಯೂರಪ್ಪ ಧನ್ಯವಾದ ತಿಳಿಸಿದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement