ಎಚ್.ಡಿ ದೇವೇಗೌಡ 
ರಾಜಕೀಯ

ಉಪ ಚುನಾವಣೆ: ನಿಜವಾಗಿ ಗೆದ್ದಿದ್ದು ದೇವೇಗೌಡ ಮತ್ತು ಜೆಡಿಎಸ್; ಹೇಗೆ, ಏಕೆ?

ಮಂಗಳವಾರ ಕರ್ನಾಟಕ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅದ್ಭುತ ಪ್ರದರ್ಶನ ನೀಡಿದ್ದು ಮಾಜಿ ಪ್ರಧಾನಿ ಎಚ್.ಡಿ ...

ಬೆಂಗಳೂರು:  ಮಂಗಳವಾರ ಕರ್ನಾಟಕ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅದ್ಭುತ ಪ್ರದರ್ಶನ ನೀಡಿದ್ದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಇಮೇಜ್ ಮತ್ತಷ್ಟು ಹೆಚ್ಚಿದೆ. ಹೀಗಾಗಿ ದೇವಗೌಡರ ಸಲಹೆಯಂತೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಲು ಒಂದಾಗಲಿವೆ,
ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರಗಳನ್ನ ಗೆಲ್ಲುವಲ್ಲಿ ಜೆಡಿಸ್ ಯಶಸ್ವಿಯಾಗಿದೆ,  ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ಬಿ,ವೈ ರಾಘವೇಂದ್ರಗೆ ಪ್ರಬಲ ಫೈಟ್ ನೀಡಿದೆ, ಮಧು ಬಂಗಾರಪ್ಪಗೆ ಕಾಂಗ್ರೆಸ್ ಬೆಂಬಲ ನೀಡಿತ್ತು,. 2014 ರಲ್ಲಿ ಮೂರೂವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ಕೇವಲ 50 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದೆ. ಜಾತ್ಯಾತೀತ ಶಕ್ತಿಗಳು ಒಂದಾದರೇ ಬಿಜೆಪಿಯನ್ನು ಮಣಿಸಬಹುದು ಎಂಬ ಪ್ರಬಲ ಸಂದೇಶವನ್ನು ಈ ಉಪ ಚುನಾವಣೆ ಫಲಿತಾಂಶ ನೀಡಿದೆ ಎಂದು ಜೆಡಿಎಸ್ ಮುಖಂಡ ರಮೇಶ್ ಬಾಬು ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ರಚನೆಯಾದ ಮೇಲೆ ಮೊದಲ ಬಾರಿಗೆ ಈ ಚುನಾವಣೆ ಎದುರಾಗಿದ್ದು, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ನಡೆಸಿದ ಮೊದಲ ಪ್ರಯೋಗ ಯಶಸ್ವಿಯಾಗಿದೆ ಎಂದು ಜೆಡಿಎಸ್ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. 
ಉಪ ಚುನಾವಣೆಯಲ್ಲಿ ಜೆಡಿಎಸ್ ಸಾಧನೆ ಮೈತ್ರಿ ಸರ್ಕಾರಗದಲ್ಲಿ ಎಚ್.ಡಿ ದೇವೇಗೌಡ ಮತ್ತು ಕುಮಾರ ಸ್ವಾಮಿ ಅವರ ಪ್ರಾಬಲ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಇನ್ನು ಮುಂದೆ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಪ್ರಯತ್ನಕ್ಕೆ ಕೈ ಹಾಕದಿರುವುಂತೆ ಮಾಡಿದೆ.
ಕರ್ನಾಟಕ ಉಪ ಚುನಾವಣೆಯಲ್ಲಿ ದೇವೇಗೌಡರ ರಣತಂತ್ರ ಫಲ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರ ಸ್ಥಾನ ಮತ್ತಷ್ಟು ಪ್ರಬಲಗೊಳ್ಳಲಿದೆ,. ಕಾಂಗ್ರೆಸ್ ಯುವ ಮತದಾರರನ್ನು ಸೆಳೆಯಲು ವಿಪಲವಾಗಿದೆ,. ಹೀಗಾಗಿ ಉಪ ಚುನಾವಣೆಯ ನಿಜವಾದ ಗೆಲುವು ಜೆಡಿಎಸ್ ಗೆ ಸೇರಿದ್ದು, ಬಿಜೆಪಿಗೆ ಪರ್ಯಾಯವಾಗಿ ಜೆಡಿಎಸ್ ಎಂಬ ಸೂಚನೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT