ಉಪಚುನಾವಣೆ ಕಣದಲ್ಲಿದ್ದ ಬಿಜೆಪಿ ಅಭ್ಯರ್ಥಿಗಳು 
ರಾಜಕೀಯ

ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ: ನವೆಂಬರ್ 15 ರಂದು ಬಿಜೆಪಿ ಆತ್ಮಾವಲೋಕನ ಸಭೆ

ಇತ್ತೀಚೆಗೆ ನಡೆದ 3 ಲೋಕಭೆ ಹಾಗೂ 2 ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿ ನಾಯಕರು ತಮ್ಮ ಕಳಪೆ ಪ್ರದರ್ಶನಕ್ಕೆ...

ಬೆಂಗಳೂರು: ಇತ್ತೀಚೆಗೆ ನಡೆದ 3 ಲೋಕಭೆ ಹಾಗೂ 2 ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿ ನಾಯಕರು  ತಮ್ಮ ಕಳಪೆ ಪ್ರದರ್ಶನಕ್ಕೆ ಕಾರಣ ಏನು ಎಂಬುದನ್ನು ಪರಿಶೀಲಿಸಲು ನವೆಂಬರ್ 15 ರಂದು ಬೆಂಗಳೂರಿನಲ್ಲಿ ಆತ್ಮಾವಲೋಕನ ಸಭೆ ಆಯೋಜಿಸಿದ್ದಾರೆ.
ವಿಶೇಷವಾಗಿ ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಳಪೆ ಪ್ರದರ್ಶನಕ್ಕೆ ಕಾರಣವಾದ ಅಂಶಗಳೇನು ಎಂಬ ಬಗ್ಗೆ ಚರ್ಚೆ ನಡೆಸಲಿದೆ. ಜೊತೆಗೆ 2019ರ ಲೋಕಸಭೆ ಚುನಾವಣೆಗೆ ಏನೇನು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಮಾಲೋಚಿಸಲಿದ್ದಾರೆ,
ಐದು ಕ್ಷೇತ್ರಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಬಿಜೆಪಿ ಜಯ ಗಳಿಸಿದೆ, ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿ 2.44 ಲಕ್ಷ ಮತಗಳಿಸಿದೆ,ಆದರೆ ಬಳ್ಳಾರಿಯಲ್ಲಿ ಮಾತ್ರ ಬಿಜೆಪಿ ಅತಿ ಹೀನಾಯ ಸೋಲು ಕಂಡಿದೆ. ಶಿವಮೊಗ್ಗದಲ್ಲೂ ಗೆದ್ದ ಮತಗಳ ಅಂತರ ಕಡಿಮೆಯಾಗಿದೆ.
ಸಮನ್ವಯ ಸಮಿತಿ ಸಭೆಯಲ್ಲಿ ರಾಮನಗರ ಘಟನೆಯ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ, 2019ರ ಲೋಕಸಭೆ ಚುನಾವಣೆಯನ್ನು ಒಟ್ಟಾದಿ ಎದುರಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ತಯಾರಿ ನಡೆಸಿವೆ, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದಳ ಕಾಮನ್ ಎನಿಮಿ  ಬಿಜೆಪಿ ವಿರುದ್ದ ಒಂದಾಗಿ ಸುಮಾರು 20  ಸೀಟುಗಳನ್ನು ಗೆಲ್ಲುವುದಾಗಿ ಭರವಸೆ ವ್ಯಕ್ತಪಡಿಸಿವೆ.
ಬಳ್ಳಾರಿಯಲ್ಲಿ ಬಿಜೆಪಿ ವ್ಯವಸ್ಥಿತವಾದ ಪ್ರಚಾರ ಮಾಡುವಲ್ಲಿ ವಿಫಲವಾಗಿದೆ, ಕಾಂಗ್ರೆಸ್  ಸಚಿವ ಸಂಪುಟದ 10 ಸಚಿವರನ್ನು ಬಳ್ಳಾರಿ ಚುನಾವಣಾ ಉಸ್ತುವಾರಿಗಾಗಿ ನಿಯೋಜಿಸಲಾಗಿತ್ತು. ಹೀಗಾಗಿ ಕಾಂಗ್ರೆಸ್ ನ ಉಗ್ರಪ್ಪ 2.43ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಹಣ ಬಲ ಉಪಯೋಗಿಸಿದೆ ಎಂದು ಬಿಜೆಪಿ ದೂರಿದೆ. 
ರಾಮನಗರದಲ್ಲಿ ಬಿಜೆಪಿ ಪರಿಸ್ಥಿತಿ ಅತ್ಯಂತ ಕೆಟ್ಟ ಪರಿಸ್ಥಿತಿಯಾಗಿದೆ. ರಾಷ್ಟ್ರೀಯ ಪಕ್ಷವೊಂದು ವಿಧಾನಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಇಲ್ಲದೆ ಚುನಾವಣೆ ಎದುರಿಸಿರುವ ಪರಿಸ್ಥಿತಿ ಬಂದಿತ್ತು.  ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಚುನಾವಣೆಗೆ 2 ದಿನ ಇರುವಾಗಲೇ ಕಣದಿಂದ ಹಿಂದೆ ಸರಿದಿದ್ದರು. 
ರಾಮನಗರ ನಮಗೊಂದು ಪಾಠವಾಗಿದೆ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪ್ರಜಾಪ್ರಭುತ್ವದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ಎಂಎಲ್ ಸಿ ರವಿ ಕುಮಾರ್ ಆಗ್ರಹಿಸಿದ್ದಾರೆ, ಉಪಚುನಾವಣೆ ಫಲಿತಾಂಶ 2019ರ ಲೋಕಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬಿರುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT