ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿ ವರ್ಚಸ್ಸು ಹಾಳು ಮಾಡಲು ಸರ್ಕಾರದಿಂದ ಅಧಿಕಾರ ದುರ್ಬಳಕೆ: ಜನಾರ್ಧನ ರೆಡ್ಡಿ

ಬಿಜೆಪಿ ಪಕ್ಷದ ವರ್ಚಸ್ಸು ಹಾಳು ಮಾಡುವ ಸಲುವಾಗಿ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು ಶನಿವಾರ ಆರೋಪಿಸಿದ್ದಾರೆ...

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ
Manjula VN
Updated On : 10 Nov 2018, 12:06 pm
ಬೆಂಗಳೂರು: ಬಿಜೆಪಿ ಪಕ್ಷದ ವರ್ಚಸ್ಸು ಹಾಳು ಮಾಡುವ ಸಲುವಾಗಿ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು ಶನಿವಾರ ಆರೋಪಿಸಿದ್ದಾರೆ. 
ಸಾರ್ವಜನಿಕರಿಗೆ ಕೋಟ್ಯಾಂತರ ವಂಚಿಸಿದ ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರ್ವೈವೇಟ್ ಲಿಮಿಟೆಡ್ ನಿರ್ದೇಶಕರ ವಿರುದ್ಧ ಬೆಂಗಳೂರಿನ ದೇವರ ಜೀವನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಮತ್ತು ಪ್ರಕರಣದ ತನಿಖಾಧಿಕಾರಿಗಳಾದ ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಎಸ್.ಗಿರೀಶ್ ಮತ್ತು ಎಸಿಪಿ ಡಾ.ಹೆಚ್.ಎನ್.ವೆಂಕಟೇಶ್ ಪ್ರಸನ್ನ ಅವರನ್ನು ಬದಲಿಸುವಂತೆ ಕೋರಿ ರೆಡ್ಡಿಯವರು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. 
ಆ್ಯಂಬಿಡೆಂಟ್ ಕಂಪನಿ ನಿರ್ದೇಶಕರ ವಿರುದ್ಧದ ಡಿ.ಜೆಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಕ್ರಿಮಿನಲ್ ಅರ್ಜಿ ಮತ್ತು ಪ್ರಕರಣದ ತನಿಖಾಧಿಕಾರಿಗಳ ಬದಲಾವಣೆ ಕೋರಿ ತಕರಾರು ಅರ್ಜಿಯನ್ನು ರೆಡ್ಡಿ ಸಲ್ಲಿಸಿದ್ದಾರೆ. 

Advertisement

Advertisement

ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಾಧ್ಯಮಗಳಿಗೆ ಮಾಹಿತಿಗಳನ್ನು ಸೋರಿಕೆ ಮಾಡುವ ಬದಲು ಶ್ರದ್ಧೆಯಿಂದ ತನಿಖೆ ನಡೆಸಬಹುದಿತ್ತು. ಆದರೆ, ಪೊಲೀಸರು ಅದನ್ನು ಮಾಡಿಲ್ಲ. ನಿರ್ಲಕ್ಷ್ಯದಿಂದ ತನಿಖೆಯನ್ನು ನಡೆಸಿದ್ದಾರೆ. ಗೌಪ್ಯವಾಗಿರಿಸಬೇಕಿದ್ದ ಮಾಹಿತಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆಂದು ರೆಡ್ಡಿ ಪರ ವಕೀಲ ಚಂದ್ರಶೇಖರ್ ಆರ್'ಪಿ ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement