ಚಿಕ್ಕಮಗಳೂರು: 57 ಕೆಜಿ ಚಿನ್ನದ ಗಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ ಮತ್ತೆ ಜೈಲು ಸೇರಿದ್ದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಉಪ್ಪು ತಿಂದವರು ನೀರು ಕುಡಿಯಲೇಬೇಕು' ಎಂದಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ. ಯಾರೇ ಆದರೂ ತಪ್ಪು ಮಾಡಿದರೆ ಶಿಕ್ಷೆ ಆಗಲೇಬೇಕು. ನ್ಯಾಯಾಲಯ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತದೆ ಎಂದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಯಡಿಯೂರಪ್ಪ ಸಿಎಂ ಆಗುತ್ತೇನೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಬಿಎಸ್ ವೈ ಗೆ ಕಣ್ಣಮುಚ್ಚಿದರೆ ಸಾಕು ವಿಧಾನಸೌಧದ ಮೂರನೇ ಮಹಡಿ ಕಾಣಿಸುತ್ತದೆ. ವಾಮ ಮಾರ್ಗದಲ್ಲಿ ಸಿಎಂ ಆಗಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics