Yeddyurappa 
ರಾಜಕೀಯ

ದೇವೇಗೌಡ, ಕುಮಾರಸ್ವಾಮಿ 'ಅವಕಾಶವಾದಿ' ರಾಜಕಾರಣಿಗಳು- ಯಡಿಯೂರಪ್ಪ

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ದೇಶದಲ್ಲಿಯೇ ಅತಿ ಹೆಚ್ಚಿನ ಅವಕಾಶವಾದಿ ರಾಜಕಾರಣಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಬೆಂಗಳೂರು:  ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ದೇಶದಲ್ಲಿಯೇ  ಅತಿ ಹೆಚ್ಚಿನ ಅವಕಾಶವಾದಿ ರಾಜಕಾರಣಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನಾನಿರತ ರೈತ ಮಹಿಳೆ ಕುರಿತು ಮುಖ್ಯಮಂತ್ರಿ ನೀಡಿರುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿಕೆ  ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವಂತಹದ್ದಲ್ಲ, ರೈತರನ್ನು ಗುಂಡಾಗಳೆಂದು ಕರೆದಿರುವುದು ಉದ್ದಟತನದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕುಮಾರಸ್ವಾಮಿ ಬಗ್ಗೆ ವಾಕ್ಪ್ರಹಾರ ನಡೆಸಿದ ಯಡಿಯೂರಪ್ಪ, ಸಾರ್ವಜನಿಕ ಜೀವನದಲ್ಲಿ ಇರುವವರು ಟೀಕೆಗಳನ್ನು ಗೌರವಯುತವಾಗಿ ಸ್ವೀಕರಿಸಬೇಕು ಎಂದರು.

ತಲೆಯಲ್ಲಿ ಅಧಿಕಾರದ ಮದವೇರಿದಂತೆ ಕುಮಾರಸ್ವಾಮಿ ಕಾಣುತ್ತಿದ್ದು,  ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ನಾಯಕರು , ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಚಿಂತಿಸಬೇಕು, ಅವರಿಗೆ ಆತ್ಮಭಿಮಾನ ಇದ್ದರೆ, ನಿರ್ಧಾರ ಅನುಷ್ಠಾನಗೊಳಿಸುವಂತೆ ಅಥವಾ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಅವರನ್ನು ಕೇಳಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.

ರೈತ ಮಹಿಳೆ ಕುರಿತು ಕುಮಾರಸ್ವಾಮಿ ಆಡಿರುವ ಉದ್ದಟನದ ಹೇಳಿಕೆ ವಿರೋಧಿಸಿ  ಹಾಗೂ ರಾಜ್ಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು  ನಾಳೆ ಜಿಲ್ಲಾ ಹಾಗೂ ತಾಲೂಕಿನಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!