ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ 
ರಾಜಕೀಯ

2019ರ ಲೋಕಸಭೆ ಚುನಾವಣೆ: ಕ್ಷೇತ್ರಗಳಿಗೆ ಉಸ್ತುವಾರಿ ನೇಮಿಸಿದ ಬಿಜೆಪಿ

2019ರ ಲೋಕಸಭೆ ಚುನಾವಣೆ ಸಂಬಂಧ ರಾಜ್ಯದ ಎಲ್ಲಾ 28 ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ...

ಬೆಂಗಳೂರು: 2019ರ ಲೋಕಸಭೆ ಚುನಾವಣೆ ಸಂಬಂಧ ರಾಜ್ಯದ ಎಲ್ಲಾ 28 ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ಮತ್ತು ಸಂಚಾಲಕರಾಗಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇಮಿಸಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದ ಉಸ್ತುವಾರಿಯಾಗಿ ಕೆ ಎಸ್ ಈಶ್ವರಪ್ಪ, ಸಿ ಎನ್ ಅಶ್ವಥನಾರಾಯಣ ಅವರನ್ನು ಮಂಡ್ಯ, ಜಗದೀಶ್ ಶೆಟ್ಟರ್ ಅವರನ್ನು ಬಳ್ಳಾರಿ, ಬಿ ಶ್ರೀರಾಮುಲು ಕೊಪ್ಪಳ, ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಅವರ ಆಪ್ತ ಸುಬ್ಬಾ ನರಸಿಂಹ ಅವರಿಗೆ ನೀಡಲಾಗಿದ್ದು, ಇದರಿಂದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರ ರಾಜಕೀಯ ಪ್ರವೇಶಕ್ಕೆ ಸುಗಮವಾಗಲಿದೆ ಎನ್ನಲಾಗುತ್ತಿದೆ. ಈ ಕ್ಷೇತ್ರದ ಸಂಚಾಲಕರಾಗಿ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ನೇಮಿಸಲಾಗಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹಾಸನಕ್ಕೆ ಸಿ ಟಿ ರವಿ, ದಕ್ಷಿಣ ಕನ್ನಡಕ್ಕೆ ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರಿಗೆ ಅರಗ ಜ್ಞಾನೇಂದ್ರ, ತುಮಕೂರಿಗೆ ಅರವಿಂದ ಲಿಂಬಾವಳಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಕೇಂದ್ರ ಭಾಗಕ್ಕೆ ಅಶ್ವಥ ನಾರಾಯಣ, ಬೆಂಗಳೂರು ಉತ್ತರಕ್ಕೆ ಬಿ ಎಚ್ ಕೃಷ್ಣಾ ರೆಡ್ಡಿ ಅವರನ್ನು ಬಿ ಎಸ್ ಯಡಿಯೂರಪ್ಪ ನೇಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT