ಜಾಫರ್ ಷರೀಫ್ 
ರಾಜಕೀಯ

ನಟ ಅಂಬರೀಶ್ ಬೆನ್ನಲ್ಲೇ ಮತ್ತೋರ್ವ ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ವಿಧಿವಶ!

ನಟ, ಮಾಜಿ ಕೇಂದ್ರ ಸಚಿವ ಅಂಬರೀಶ್ ಬೆನ್ನಲ್ಲೇ ಮತ್ತೋರ್ವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ರಾಜಕಾರಣಿ ಜಾಫರ್ ಷರೀಫ್ ಅವರು ವಿಧಿವಶರಾಗಿದ್ದಾರೆ...

ಬೆಂಗಳೂರು: ನಟ, ಮಾಜಿ ಕೇಂದ್ರ ಸಚಿವ ಅಂಬರೀಶ್ ಬೆನ್ನಲ್ಲೇ ಮತ್ತೋರ್ವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ರಾಜಕಾರಣಿ ಜಾಫರ್ ಷರೀಫ್ ಅವರು ವಿಧಿವಶರಾಗಿದ್ದಾರೆ. 
85 ವರ್ಷದ ಜಾಫರ್ ಷರೀಫ್ ಅವರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ನಗರದ ಕನ್ನಿಂಗ್ ಹ್ಯಾಮ್ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. 
1933ರಂದು ನವೆಂಬರ್ 3ರಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಜಾಫರ್ ಷರೀಫ್ ಅವರು ಜನಿಸಿದ್ದರು. ಷರೀಫ್ ಅವರು ಪಿವಿ ನರಸಿಂಹರಾವ್ ಅವರ ಅಧಿಕಾರವಧಿಯಲ್ಲಿ 1991ರ ಜೂನ್ 21ರಿಂದ 1995ರ ಅಕ್ಟೋಬರ್ 16ರವರೆಗೂ ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಜಾಫರ್ ಷರೀಫ್ ಅವರು ಉರ್ದುವಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಅಜಾದ್ ನೆನಪಿನಾರ್ಥ ಇಂಡಿಯಾ ವಿನ್ಸ್ ಫ್ರೀಡಂ ಎಂಬ ಪುಸ್ತಕವನ್ನು ಬರೆದಿದ್ದು ಇದೇ ತಿಂಗಳ 28ರಂದು ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. 

ಜಾಫರ್ ಷರೀಫ್ ರೈಲ್ವೆ ಸಚಿವರಾಗಿದ್ದಾಗ ಕರ್ನಾಟಕದ ರೈಲ್ವೆಗೆ ಸಾಕಷ್ಟು ಅನುದಾನ ನೀಡಿದ್ದರು. ಇನ್ನು ಮೈಸೂರು ಮತ್ತು ಬೆಂಗಳೂರು ನಡುವೆ ಚಾಮುಂಡಿ ಎಕ್ಸ್ ಪ್ರೆಸ್ ಮತ್ತು ಟಿಪ್ಪು ಎಕ್ಸ್ ಪ್ರೆಸ್ ರೈಲು ಸಂಚರಿಸಲು ಸಾಕಷ್ಟು ಕೆಲಸ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!