ಎಚ್ ಡಿ ಕುಮಾರಸ್ವಾಮಿ, 
ರಾಜಕೀಯ

ಅಕ್ಟೋಬರ್ 12ರೊಳಗೆ ಸಚಿವ ಸಂಪುಟ ವಿಸ್ತರಣೆ: ಸಿಎಂ ಕುಮಾರಸ್ವಾಮಿ

ಅಕ್ಟೋಬರ್ 12ರೊಳಗೆ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದೆ....

ಬೆಂಗಳೂರು: ಅಕ್ಟೋಬರ್ 12ರೊಳಗೆ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಖಾಲಿ ಇರುವ ಏಳು ಸಚಿವ ಸ್ಥಾನಗಳನ್ನು ಅಕ್ಟೋಬರ್ 12ರೊಳಗೆ ಭರ್ತಿ ಮಾಡಲಾಗುವುದು. ಸಂಪುಟ ವಿಸ್ತರಣೆ ಕುರಿತು ಎಲ್ಲಾ ತಯಾರಿಗಳು ಹಾಗೂ ವಿವಿಧ ಹಂತದ ಚರ್ಚೆಗಳು ನಡೆಯುತ್ತಿವೆ ಎಂದರು.
ಖಾಲಿ ಇರುವ ಕಾಂಗ್ರೆಸ್ ನ ಆರು ಹಾಗೂ ಜೆಡಿಎಸ್‍ನ ಪಾಲಿನ ಒಂದು ಸಚಿವ ಸ್ಥಾನ ಸೇರಿದಂತೆ ಒಟ್ಟು ಏಳು ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಹೈಕಮಾಂಡ್ ನಾಯಕರ ಜತೆ ಕಾಂಗ್ರೆಸ್ ಮುಖಂಡರು ಹಾಗೂ ನಾವು ಕೂಡ ಮಾತುಕತೆ ನಡೆಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ತೀರ್ಮಾನದಂತೆ ಸೆಪ್ಟಂಬರ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ, ಸಿದ್ದರಾಮಯ್ಯನವರ ವಿದೇಶ ಪ್ರವಾಸ, ಬೆಳಗಾವಿ ಕಾಂಗ್ರೆಸ್‍ನಲ್ಲಿ ಉಂಟಾದ ಭಿನ್ನಮತ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮುಂದೂಡೆಕೆಯಾಗಿತ್ತು.
ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಲಾಭಿ ನಡೆಯುತ್ತಿದ್ದು, ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ, ಆರ್ ರೋಷನ್ ಬೇಗ್, ಎಚ್ ಕೆ ಪಾಟೀಲ್ ಹಾಗೂ ಎಂ.ಬಿ.ಪಾಟೀಲ್ ಅವರು ರೇಸ್ ನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ