ಪತ್ನಿ ಅನಿತಾ ಜೊತೆ ಸಿಎಂ ಕುಮಾರ ಸ್ವಾಮಿ
ಬೆಂಗಳೂರು: ಮುಂಬರುವ ರಾಮನಗರ ಮತ್ತು ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸಿದ್ಧವಾಗುತ್ತಿವೆ, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ,
ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ರಾಮನಗರ ವಿಧಾನ ಸಭೆ ಕ್ಷೇತ್ರಕ್ಕೆ ಅನಿತಾ ಕುಮಾರ ಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ, ದೇವೇಗೌಡ ಕುಟುಂಬದ ಭದ್ರಕೋಟೆಯಾಗಿರುವ ರಾಮನಗರದಿಂದ ಅನಿತಾ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಲಾಗುತ್ತಿದೆ.
ಜಮಖಂಡಿಯಿಂದ ಕಾಂಗ್ರೆಸ್ಆನಂದ ನ್ಯಾಮಗೌಡ ಸ್ಪರ್ದಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಇನ್ನೂ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಅಕ್ಚೋಬರ್ 2ನೇ ವಾರದಲ್ಲಿ ನಡೆಯ.ಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಅಕ್ಟೋಬರ್ 6ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಸಮಾಲೋಚಿಸಲು ಶನಿವಾರ ಸಿಎಂ ಕುಮಾರ ಸ್ವಾಮಿ ದೆಹಲಿಗೆ ತೆರಳಲಿದ್ದಾರೆ,
ಮಂಗಳವಾರ ಡಿಸಿಎಂ ಪರಮೇಶ್ವರ್ ಅವರನ್ನ ಭೇಟಿ ಮಾಡಿದ ಸಿಎಂ ಕುಮಾರ ಸ್ವಾಮಿ, ಸಂಪುಟ ವಿಸ್ತರಣ ಮತ್ತು ನಿಗಮ- ಮಂಡಳಿ ನೇಮಕಾತಿ ಬಗ್ಗ ಚರ್ಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics