ಸತೀಶ್ ಜಾರಕಿಹೊಳಿ 
ರಾಜಕೀಯ

ರಾಣಿ ಚನ್ನಮ್ಮ ವಿವಿ ಕೇಸರೀಕರಣದ ವಿರುದ್ಧ ಹೋರಾಟ: ಸತೀಶ್ ಜಾರಕಿಹೊಳಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್.....

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.
ರಾಣಿ ಚನ್ನಮ್ಮ ವಿವಿಯಲ್ಲಿ ನಡೆದ ದಾಂದಲೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಸತೀಶ್ ಜಾರಕಿಹೊಳಿ, ಸಿಂಡಿಕೇಟ್ ಸದಸ್ಯ ರಾಜು ಚಿಕ್ಕನಗೌಡರ ಸೇರಿದಂತೆ ಕೆಲವರು ಎಬಿವಿಪಿ ಸಂಘಟನೆ ಮುಂದಿಟ್ಟುಕೊಂಡು ವಿವಿಯನ್ನು ಕೇಸರೀಕರಣ ಮಾಡುತ್ತಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಇಷ್ಟು ದಿನ ವಿಶ್ವವಿದ್ಯಾಲಯ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸುಮ್ಮನಿದ್ದೆ. ಇನ್ನು ಮುಂದೆ ನಾವು ರಾಜಕೀಯ ಮಾಡಬೇಕಾಗುತ್ತದೆ ಎಂದು ಜಾರಕಿಹೊಳಿ ಎಚ್ಚರಿಕೆ ನೀಡಿದರು.
ಇನ್ನು ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು, ಕೇಸರೀಕರಣವನ್ನು ಭಾರತದಲ್ಲಲ್ಲದೆ ಪಾಕಿಸ್ತಾನದಲ್ಲಿ ಮಾಡಲಾದಿತೆ? ಕೇಸರಿ ನಮ್ಮ ದೇಶದ ಹೆಮ್ಮೆಯ ಸಂಕೇತ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ