ಬಿಎಸ್'ಪಿ ಪಕ್ಷದ ಸಚಿವ ಎನ್. ಮಹೇಶ್ 
ರಾಜಕೀಯ

ಕಾಂಗ್ರೆಸ್, ಜೆಡಿಎಸ್ ಜಾತಿವಾದಿ ಪಕ್ಷಗಳು: ಬಿಎಸ್'ಪಿ ಸಚಿವ

ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಳಿಕ ಇದೀಗ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಎಸ್'ಪಿ ಪಕ್ಷದ ಏಕೈಕ ಸಚಿವ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

ಮೈಸೂರು: ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಳಿಕ ಇದೀಗ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಎಸ್'ಪಿ ಪಕ್ಷದ ಏಕೈಕ ಸಚಿವ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ರಾಜ್ಯದಲ್ಲಿರುವ ಮೂರು ಪ್ರಮುಖ ರಾಜಕೀಯ ಪಕ್ಷಗಳು ಜಾತಿವಾದಿ ಪಕ್ಷಗಳಾಗಿವೆ ಎಂದು ಬಿಎಸ್'ಪಿ ಪಕ್ಷದ ಸಚಿವ ಎನ್. ಮಹೇಶ್ ಅವರು ಆರೋಪಿಸಿದ್ದಾರೆ. 
ಜೆಡಿಎಸ್ ಹಾಗೂ ಇತರೆ ಪಕ್ಷಗಳು ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿದ್ದು, ಸಮಾಜವನ್ನು ಒಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್'ಪಿ-ಜೆಡಿಎಸ್ ಮೈತ್ರಿ ಕುರಿತು ಪಕ್ಷದ ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ನಗರ ಸ್ಥಳೀಯ ಚುನಾವಣೆಯಲ್ಲಿ ಏಕಾಂಗಿಯೇ ಸ್ಪರ್ಧೆ ನಡೆಸಿತ್ತು ಎಂದು ಹೇಳಿದ್ದಾರೆ. 
ಬಿಎಸ್'ಪಿ ಕೇವಲ ರಾಜಕೀಯ ಪಕ್ಷವಲ್ಲ. ಜನರನ್ನು ಒಗ್ಗೂಡಿಸಲು ಹೋರಾಡುತ್ತಿರುವ ಪಕ್ಷವಾಗಿದೆ. ಹಿಂದೂಳಿದ ಹಾಗೂ ಅಲ್ಪಸಂಖ್ಯಾತ ಜನರನ್ನು ಉತ್ತಮ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಪಕ್ಷವಾಗಿದೆ. ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿದೆ. ಬಡವರು ಹಾಗೂ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಸಬಲೀಕರಣಗೊಳಿಸುವಲ್ಲಿ ಪಕ್ಷಗಳು ವಿಫಲಗೊಂಡಿವೆ ಎಂದು ತಿಳಿಸಿದ್ದಾರೆ. 
ಮಹೇಶ್ ಅವರ ಈ ಹೇಳಿಕೆಗೆ ಜೆಡಿಎಸ್ ವಕ್ತಾರ ತನ್ವೀರ್ ಅಹ್ಮದ್ ಅವರು ತೀವ್ರವಾಗಿ ಕಿಡಿಕಾರಿದ್ದು, ಜೆಡಿಎಸ್ ಅಥವಾ ಬಿಎಸ್'ಪಿ ಪಕ್ಷಗಳು ಅಸ್ತಿತ್ವಕ್ಕೆ ಬರುವುದಕ್ಕೂ ಮುಂಚಿನಿಂದಲೂ ಜನರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಲೇ ಇದ್ದಾರೆ. ಉನ್ನತ ಸ್ಥಾನದಲ್ಲಿರುವವರು ಈ ರೀತಿಯ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. 
ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಮಾತನಾಡಿ, ಬಿಎಸ್'ಪಿ ಜೊತೆಗಿನ ಮೈತ್ರಿ ಕುರಿತು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಯಾವತಿಯವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!