ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಂಪುಟ ವಿಸ್ತರಣೆ: ಸಿಎಂ ಕುಮಾರಸ್ವಾಮಿ
ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ನವದೆಹಲಿ: ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಮಾಡಬೇಕು ಎಂದು ಹಲವು ನಾಯಕರು ಬಯಸಿದ್ದಾರೆ. ಆದರೆ ಯಾರನ್ನು ಸಂಪುಟಕ್ಕೆ ಸೇರಬೇಕು ಎಂಬುದನ್ನು ಕಾಂಗ್ರೆಸ್ ನಿರ್ಧರ ಮಾಡಬೇಕಿದೆ ಎಂದರು.
ಇಂದು ಅಥವಾ ನಾಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಯತ್ನಿಸುತ್ತೇನೆ ಮತ್ತು ಅವರ ನಿರ್ಧಾರದಂತೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಇದೇ ವೇಳೆ, ಸಾಲ ಮನ್ನಾ ಸೌಲಭ್ಯ ಪಡೆಯಲು ಬೆಳೆ ವಿಮೆ ವಿವರ ನೀಡಲು ರೈತರಿಗೆ ರಾಜ್ಯ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ. ಆದರೆ ಆದಷ್ಟು ಬೇಗ ತಮ್ಮ ತಮ್ಮ ಹೊಬಳಿಯಲ್ಲಿರುವ ಕಂದಾಯ ಇಲಾಖೆ ವಿವರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.