ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ರಾಜಕೀಯ ಪ್ರವೇಶ ಕುರಿತು ಸಮಯ ಬಂದಾಗ ನಿರ್ಧರಿಸುವೆ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್

ತಾವು ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂದು ಪಕ್ಷದ ಮುಖಂಡರು ಒತ್ತಡ ಏರುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ...

ಮಂಡ್ಯ: ತಾವು ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂದು ಪಕ್ಷದ ಮುಖಂಡರು ಒತ್ತಡ ಏರುತ್ತಿದ್ದು,  ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ಸಮಯ ಇದೆ. ಸಮಯ ಬಂದಾಗ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನ ಬಳಿ ಮೂರು ದಿನಗಳ ಹಿಂದೆ ನಗರದಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ನಿಖಿಲ್ ಮಾತನಾಡಿದರು, ಈಗಾಗಲೇ ಕಾರ್ಯಕರ್ತರು ಮಂಡ್ಯ ಹಾಗೂ ರಾಮನಗರದಿಂದ ಸ್ಪರ್ಥಿಸಲು ಒತ್ತಾಯಿಸುತ್ತಿದ್ದಾರೆ, ಈ ಸಂಬಂಧ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ ಅವರು ಚುನಾವಣೆಯಲ್ಲಿ ಸ್ಪರ್ದಿಸುವ ಇಚ್ಚೆ ವ್ಯಕ್ತ ಪಡಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೆ, ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದರು.  ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ಸಿಎಂ ಕುಮಾರಸ್ವಾಮಿ ಅವರೇ ಬರಬೇಕಿತ್ತು. ಆದರೆ, ಕೆಲಸದ ಒತ್ತಡದಿಂದ ಬರಲಾಗದೇ ಅವರ ಪರವಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT