ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸಂಪುಟ ವಿಸ್ತರಣೆ ವಿಳಂಬ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಸಿ ಪಾಟೀಲ್

ಪದೇಪದೆ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿರುವುದರಿಂದ ಕೆರಳಿದ ಕಾಂಗ್ರೆಸ್ ಶಾಸಕ...

ಬಿಸಿ ಪಾಟೀಲ್
Lingaraj Badiger
Updated On : 7 Oct 2018, 2:21 am
ಬೆಂಗಳೂರು: ಪದೇಪದೆ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿರುವುದರಿಂದ ಕೆರಳಿದ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಶಾಸಕರಿಗೆ ಮಾಡುತ್ತಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 10 ಅಥವಾ 12ರಂದು ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇತ್ತು. ಆದರೆ ಈಗ ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಚುನಾವಣೆ ಮುಗಿಯುವವರೆಗೆ ಸಂಪುಟ ವಿಸ್ತರಣೆ ಮಾಡದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಬಿಸಿ ಪಾಟೀಲ್ ಅವರು ಇಂದು ಟ್ವೀಟ್ ಮೂಲಕ ತೀವ್ರ ಅಸಮಧಾನಾ ಹೊರ ಹಾಕಿದ್ದಾರೆ.
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿರುವ ಕ್ರಮ ಶಾಸಕರನ್ನು ಅವಮಾನ ಮಾಡಿದ ಹಾಗೆ ಪ್ರಜಾಪ್ರಭುತ್ವವನ್ನು ಹತ್ಯೆಗೈದ ಹಾಗೆ, ಪಕ್ಷದ ಹೆಸರಿನಲ್ಲಿ ಈಗ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ಹಿಡಿಯಲಾಗುತ್ತಿದೆ ಎಂದು ಬಿಸಿ ಪಾಟೀಲ್ ಪಕ್ಷದ ವಿರುದ್ದ ಟೀಕೆ ಮಾಡಿದ್ದಾರೆ.

Advertisement

Advertisement

ಬಿಸಿ ಪಾಟೀಲ್ ಅವರು ತಮ್ಮ ಟ್ವೀಟ್ ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ,  ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ  ಡಾ.ಜಿ.ಪರಮೇಶ್ವರ ಅವರನ್ನು ಟ್ಯಾಗ್‌ ಮಾಡಿ ಶಾಕ್‌ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement