ಬೆಂಗಳೂರು: ಲೋಕಸಭೆ ಉಪ ಚುನಾವಣೆಯಿಂದ ದೂರವಿರುವಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾಲ್ಕರಿಂದ ಐದು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗ ಉಪ ಚುನಾವಣೆ ಅಗತ್ಯೆ ಇತ್ತೆ? ಎಂದು ಪ್ರಶ್ನಿಸಿರುವ ಸುಧಾಕರ್ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆಯಿಂದ ದೂರವಿರುವ ಮೂಲಕ ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ವಿರುದ್ದ ಪ್ರತಿಭಟಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಚುನಾವಣಾ ಆಯೋಗದ ಈ ನಿರ್ಧಾರದಿಂದ ಖಜಾನೆಯಲ್ಲಿರುವ ಹಣ ಖಾಲಿಯಾಗಲಿದ್ದು, ಇದೊಂದು ಪ್ರಜಾಪ್ರಭುತ್ವದ ಕುಣಿತ ಎಂದು ಕಿಡಿಕಾರಿದ್ದಾರೆ.
ಇತ್ತೀಚಿಗೆ ವಿಧಾನಸಭೆಗೆ ಆಯ್ಕೆಯಾದ ಸಂಸದರ ರಾಜಿನಾಮೆಯಿಂದ ತೆರವಾದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ಘೋಷಣೆಯಾಗಿದೆ.