ಬೆಂಗಳೂರು: ನಿರೀಕ್ಷೆಯಂತೆ ರಾಮನಗರ ವಿಧಾನಸಭೆ ಉಪ ಚುನಾವಣೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಪತ್ನಿ ಅನಿತಾ ಸ್ಪರ್ದೆಗಿಳಿಯುವುದು ಖಚಿತವಾಗಿದೆ. ಜೆಡಿಎಸ್ ನಿಂದ ಅಕ್ಟೋಬರ್ 11 ರಂದು ಅನಿತಾ ಕುಮಾರ ಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಾಲೂಕು ಜೆಡಿಎಸ್ ಮುಖಂಡರು ಅಧಿಕೃತವಾಗಿ ಘೋಷಿಸಿದ್ದಾರೆ.
ರಾಮನಗರ ಕ್ಷೇತ್ರದ ಜನತೆಯ ಒತ್ತಾಸೆಯಂತೆ ನಾನೇ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಅನಿತಾ ಕುಮಾರಸ್ವಾಮಿ ಹೇಳಿದ್ದರು, ರಾಮನಗರ ಕ್ಷೇತ್ರ ನಮ್ಮ ಕುಟುಂಬದ ಪುಣ್ಯಭೂಮಿಯಾಗಿದೆ. ಕಾರ್ಯಕರ್ತರು ಮತ್ತು ಮುಖಂಡರೇ ನಮ್ಮ ಶಕ್ತಿಯಾಗಿದ್ದಾರೆ ಎಂದು ತಿಳಿಸಿದ್ದರು.
ಇನ್ನು ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಪತ್ರಿಕಾಗೋಷ್ಠಿಯಲ್ಲೇ ಕಾರ್ಯಕರ್ತರು ಪರಸ್ಪರ ಗದ್ದಲ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪರ್ಧಿಸಿ, ಗೆದ್ದಿದ್ದರು, ನಂತರ ರಾಮನಗರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡಿದ್ದರು, ಕುಮಾರ ಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ರಾಮನಗರ ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics